ಬೆಂಗಳೂರು: ತಂದೆಗೆ ಚಾಕುವಿನಿಂದ ಇರಿದು ಮಗ ಕೊಲೆ ಮಾಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ.
ವೇಲಾಯುದನ್ (76) ಕೊಲೆಯಾದವರು. ವಿನೋದ್ ಕುಮಾರ್ ಕೊಲೆ ಮಾಡಿದ ಆರೋಪಿ. ಇವರು ಮೂಲತಃ ಕೇರಳದ ಏರಿಮಲೆಯವರು. ಮನೆಯಲ್ಲಿದ್ದ ಚಾಕು ತೆಗೆದುಕೊಂಡು ತಂದೆ ವೇಲಾಯುದನ್ ಅವರಿಗೆ ಇರಿದು ಕೊಲೆ ಮಾಡಿದ್ದಾನೆ.
ನಡೆದಿದ್ದೇನು?: ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗನ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು, ಮನೆಯಲ್ಲಿದ್ದ ಚಾಕುವಿನಿಂದ ಇರಿದು ತಂದೆಯನ್ನು ಪಾಪಿ ಮಗ ಕೊಲೆ ಮಾಡಿದ್ದಾನೆ. ವೇಲಾಯುದನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೋಸ್ಟ್ ಆಫೀಸ್ ರಸ್ತೆಯಲ್ಲಿ ಘಟನೆ ನಡೆದಿದೆ.