ಜಿಎಲ್.ಹಳ್ಳಿಯಲ್ಲಿ ಏರ್ಪಡಿಸಿದ್ದ ಪ್ರತಿಭಾ ಕಾರಂಜಿಯಲ್ಲಿ ಭೀಮನ ಪಾತ್ರದಲ್ಲಿ ಮಿಂಚಿದ ವಿದ್ಯಾರ್ಥಿ ಅನಂತರೆಡ್ಡಿ. 
ಜಿಲ್ಲೆ

ಸುಪ್ತ ಪ್ರತಿಭೆ ಅನಾವರಣಕ್ಕೆ ಸಹಕಾರಿ

ನರೇಶ್ ಕುಮಾರ್

ಸಂಡೂರು: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಸಹಕಾರಿ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಶರಣಬಸಪ್ಪ ಹೇಳಿದರು.

ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದ ಕುಮಾರಸ್ವಾಮಿ ಗ್ರಾಮಾಂತರ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

11 ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಒಂಬತ್ತು ವಿದ್ಯಾರ್ಥಿಗಳು ಆಯ್ಕೆಯಾದರು.

ಗ್ರಾಪಂ ಅಧ್ಯಕ್ಷೆ ಪಾರ್ವತಮ್ಮ ಕುಮಾರಸ್ವಾಮಿ, ಶಾಲೆಯ ಅಧ್ಯಕ್ಷ ಎನ್.ಕುಮಾರಸ್ವಾಮಿ, ಕಾರ್ಯದರ್ಶಿ ಮರ‌್ರಿಸ್ವಾಮಿ, ಮಾಜಿ ಅಧ್ಯಕ್ಷ ಗೋಪಾಲ ರೆಡ್ಡಿ, ಜಿಪಂ ಮಾಜಿ ಸದಸ್ಯ ಸರಸ್ವತಿ ಯರ‌್ರಿಸ್ವಾಮಿ ರೆಡ್ಡಿ, ಸರ್ಕಾರಿ ನೌಕರರ ಸಂಘದ ಸ್ಥಳೀಯ ಅಧ್ಯಕ್ಷ ಚೌಕಳಿ ಪರಶುರಾಮ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಚ್.ತಮ್ಮಪ್ಪ, ಉಪಾಧ್ಯಕ್ಷೆ ಗೀತಮ್ಮ, ಮಧುಕುಮಾರಿ, ನಿರ್ದೇಶಕ ಕೆ.ರವಿ ಇದ್ದರು.