ಜಿಲ್ಲೆ

ಸೋಯಾಬಿನ್ ಖರೀದಿ ಅವಧಿ ವಿಸ್ತರಣೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯ ಕೃಷಿ ಮಾರಾಟ ಮಂಡಳಿಯ ಪ್ರಸ್ತಾವನೆಯ ಮೇರೆಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024- 25ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೋಯಾಬಿನ್ ಉತ್ಪನ್ನವನ್ನು ಖರೀದಿಗೆ ರೈತರ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ. ನೋಂದಣಿ ಕಾಲಾವಧಿಯನ್ನು ಅ. 20ರಿಂದ ನ. 20ರವರೆಗೆ ವಿಸ್ತರಿಸಲಾಗಿದೆ. ನೋಂದಣಿಯ ಜೊತೆಗೆ ಖರೀದಿ ಪ್ರಕ್ರಿಯೆಯನ್ನೂ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.