ರಾಯಚೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂತಾರಾಜ್ಯ ಗಡಿ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ಯರಗೇರಾ ಹಾಗೂ ಇಡಪನೂರು ಗ್ರಾಮಗಳ ಹೊರವಲಯದಲ್ಲಿ ಆಂಧ್ರಪ್ರದೇಶಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ನಲ್ಲಿರುವ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿ ಜಿಲ್ಲೆಯಿಂದ ಹೊರಹೋಗುವ ಹಾಗೂ ಜಿಲ್ಲೆಯಿಂದ ಆಂಧ್ರಕ್ಕೆ ಹೋಗುವ ಎಲ್ಲ ವಾಹನಗಳ ತಪಾಸಣೆ ನಡೆಸುವಂತೆ ಸೂಚನೆ ನೀಡಿದರು.
ಚುನಾವಣೆ ಹಿನ್ನೆಲೆಯಲ್ಲಿ ಹಣ, ಮದ್ಯ ಸಾಗಣೆ ಮೇಲೆ ನಿಗಾವಹಿಸಬೇಕು. ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು, ವಾಹನ ಕಂಡು ಬಂದಲ್ಲಿ ಮೇಲಾಗಳಿಗೆ ಮಾಹಿತಿ ನೀಡಬೇಕು. ಚುನಾವಣೆ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಸಿಸಿ ಕ್ಯಾಮರಾಗಳು ನಿರಂತರವಾಗಿ ಚಾಲನೆಯಲ್ಲಿರಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಿಪಿಐ ನಿಂಗಪ್ಪ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.