ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಅಂತರಿಕ್ಷ ದಿನವನ್ನು ಆಚರಿಸಲಾಯಿತು.ಟಿ.ಜಿ.ಪ್ರೇಮಕುಮಾರ್, ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಡಿ.ರಮ್ಯಾ, ಗೀತಾ, ರೇಖಾ ಇತರರು ಇದ್ದರು.  
ಜಿಲ್ಲೆ

ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತರಿಕ್ಷ ದಿನ ಆಚರಣೆ

ಅಭಿನಯ್ ಎಚ್.ಎಂ

ಕುಶಾಲನಗರ: ವಿಜ್ಞಾನ ಸಂಘ, ಎಸ್‌ಡಿಎಂಸಿ ಮತ್ತು ಎನ್ನೆಸ್ಸೆಸ್ಸ್ ಘಟಕದ ಸಹಯೋಗದಲ್ಲಿ ಸಮೀಪದ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ರಾಷ್ಟ್ರೀಯ ಅಂತರಿಕ್ಷ ದಿನವನ್ನು ಆಚರಿಸಲಾಯಿತು.

ರಾಷ್ಟ್ರೀಯ ಅಂತರಿಕ್ಷ ದಿನದ ಮಹತ್ವ ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಚಂದ್ರಯಾನ-3 ರ ಯಶಸ್ಸಿನ ಸ್ಮರಣಾರ್ಥವಾಗಿ ಆ.23ರಂದು ಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ. ಇಂತಹ ದಿನಗಳು ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶದ ಕುರಿತು ವೈಜ್ಞಾನಿಕ ಸಂಶೋಧನೆ ಮತ್ತು ಸಾಹಸಗಳನ್ನು ಕೈಗೊಳ್ಳಲು ಪ್ರೇರೇಪಣೆ ಸಿಗುತ್ತದೆ ಎಂದರು.

ಭಾರತದ ಬಾಹ್ಯಾಕಾಶ ಸಾಧನೆಗಳ ಕುರಿತು ಮಾಹಿತಿ ನೀಡಿದ ಶಾಲೆಯ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯಾ, ಬಾಹ್ಯಾಕಾಶ ಸಾಧನೆಗಳ ಪೈಕಿ ಚಂದ್ರಯಾನ-3 ಯೋಜನೆಗೆ ವಿಶೇಷ ಸ್ಥಾನವಿದೆ. ಕಳೆದ ವರ್ಷ ಆ.23ರಂದು ಚಂದ್ರಯಾನ-3 ಮಿಷನ್‌ನ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಕ್ಷಣದಲ್ಲಿ ಇತಿಹಾಸವೇ ಸೃಷ್ಟಿಯಾಯಿತು. ಈ ಸ್ಥಳಕ್ಕೆ ತಲುಪಿದ ಮೊದಲ ರಾಷ್ಟ್ರ ಭಾರತವಾಯಿತು. ಈ ಸಂಭ್ರಮವನ್ನು ಸದಾ ಸ್ಮರಣೀಯಗೊಳಿಸಲು ಕೇಂದ್ರ ಸರ್ಕಾರದ ಸೂಚನೆಯಂತೆ ಪ್ರಸಕ್ತ ವರ್ಷದಿಂದ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ ಎಂದರು.

ಅಂತರಿಕ್ಷಕ್ಕೆ ಉಡಾಯಿಸುವ ರಾಕೆಟ್ ಉಪಕರಣದ ಮಾದರಿಯನ್ನು ಮಕ್ಕಳಿಗೆ ಪ್ರಾತ್ಯಕ್ಷಿಕೆ ಮೂಲಕ ಪ್ರದರ್ಶಿಸಿ ಅಂತರಿಕ್ಷ ಯಾನದ ಬಗ್ಗೆ ವಿವರಿಸಲಾಯಿತು. 2024ರ ಆ.23ರಂದು ಚಂದ್ರನನ್ನು ಸ್ಪರ್ಶಿಸಿದ ದಿನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಶಾಲಾ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯಾ, ಸಿಬ್ಬಂದಿ ಎಂ.ಉಷಾ ಇದ್ದರು.