ಅರಕಲಗೂಡು: ಪಟ್ಟಣದ ಕೋಟೆ ಐತಿಹಾಸಿಕ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಭಾನುವಾರ ನರಸಿಂಹ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ನರಸಿಂಹ ಜಯಂತಿ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆ ಮೂಲ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ ಮಾಡಿ, ವಿವಿಧ ಪೂಜಾ ಕೈಂಕರ್ಯಗಳನ್ನು ವಿಧಿವತ್ತಾಗಿ ನಡೆಸಲಾಯಿತು. ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.