ಸುಳ್ಯ: ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆ ಇರುವುದರಿಂದಾಗಿ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಬೀಳುತ್ತಿದೆ. ಸಿದ್ದರಾಮಯ್ಯ ಸರ್ಕಾರ ತಮ್ಮವರನ್ನು ಸಮಧಾನಪಡಿಸುವುದರಲ್ಲೇ ಕಾಲ ಕಳೆಯುತ್ತಿದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.
ನಗರದ ಕೇರ್ಪಳ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ಸೋಮವಾರ ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿ ಮಾತನಾಡಿ, ಸುಳ್ಯ ಮಂಡಲದ ಸಂಘಟನೆ ರಾಜ್ಯಕ್ಕೆ ಮಾದರಿ ಎಂದರು. ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ರಾಜ್ಯ ಸರ್ಕಾರ ಶಾಲೆಗಳಿಗೂ ಅನುದಾನ ನೀಡದ ಬಗ್ಗೆ ಖೇದ ವ್ಯಕ್ತಪಡಿಸಿದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರನ್ನು ಸನ್ಮಾನಿಸಲಾಯಿತು. ಲೋಕಸಭಾ ಚುನಾವಣೆ ಉಸ್ತುವಾರಿ ಹರೀಶ್ ಕಂಜಿಪಿಲಿ, ವಿವಿಧ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಯಿತು.
ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಎಸ್.ಅಂಗಾರ, ಬಿಜೆಪಿ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ರಾಕೇಶ್ ರೈ ಕೆಡೆಂಜಿ, ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಜಿಲ್ಲಾ ಕಾರ್ಯದರ್ಶಿ ಕುಮಾರ್ ಮುಳುಗಾಡು, ಮಂಡಲ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಪ್ರಮುಖರಾದ ಎಸ್.ಎನ್.ಮನ್ಮಥ, ಆಶಾ ತಿಮ್ಮಪ್ಪ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ ಮತ್ತಿತರರು ಉಪಸ್ಥಿತರಿದ್ದರು.
ವಿನಯಕುಮಾರ್ ಕಂದಡ್ಕ ಸ್ವಾಗತಿಸಿದರು. ಪ್ರದೀಪ್ ರೈ ಮನವಳಿಕೆ ಕಾರ್ಯಕ್ರಮ ನಿರೂಪಿಸಿದರು. ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.