ಜಿಲ್ಲೆ

ಬೆಂಗಳೂರು-ಬೆಳಗಾವಿ ಮಧ್ಯೆ ವಿಶೇಷ ಎಕ್ಸ್​ಪ್ರೆಸ್​ ರೈಲು

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಯುಗಾದಿ ಮತ್ತು ರಮಜಾನ್​ ಹಬ್ಬದ ಪ್ರಯುಕ್ತ ಬೆಂಗಳೂರು-ಬೆಳಗಾವಿ ಮಧ್ಯೆ ವಿಶೇಷ ಎಕ್ಸ್​ಪ್ರೆಸ್​ ರೈಲು ಸಂಚಾರವನ್ನು ನೈಋತ್ಯ ರೈಲ್ವೆ ವಲಯ ಪ್ರಾರಂಭಿಸಿದೆ.

ಎಸ್​ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್​ಪ್ರೆಸ್​ ರೈಲು ಮಾ. 28ರಂದು ಸಂಜೆ 7:00 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ-ಎಸ್​ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್​ ರೈಲು ಮಾ. 29 ರಂದು ಸಂಜೆ 5 ಗಂಟೆಗೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗಿನ ಜಾವ 4.30ಕ್ಕೆ ಎಸ್​ಎಂವಿಟಿ ಬೆಂಗಳೂರು ತಲುಪಲಿದೆ.

ಎಸ್​ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್​ಪ್ರೆಸ್​ ರೈಲು ಮಾ. 30 ರಂದು ರಾತ್ರಿ 7 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ-ಎಸ್​ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್​ ರೈಲು ಮಾ. 31 ರಂದು ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗಿನ ಜಾವ 4.30ಕ್ಕೆ ಎಸ್​ಎಂವಿಟಿ ಬೆಂಗಳೂರು ತಲುಪಲಿದೆ.

ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್​ಎಂಎಂ ಹಾವೇರಿ, ಎಸ್​ಎಸ್​ಎಸ್​ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.