ಬೇಲೂರು: ರಾಜ್ಯ ಸರ್ಕಾರಿ ನೌಕರರ ವಿಶೇಷ ಮಹಾಸಭೆ ಅ.1 ರಂದು ಕೊಪ್ಪಳದಲ್ಲಿ ಆಯೋಜಿಸಿದ್ದು, ಬೇಲೂರು ತಾಲೂಕಿನ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಆರ್.ಮಂಜುನಾಥ್ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ವಿಶೇಷ ಮಹಾಸಭೆಯೂ ಕೊಪ್ಪಳದ ಹಿರೇಸಿಂಧೋಗಿ ರಸ್ತೆಯಲ್ಲಿರುವ ಮಹಾವೀರ ಸಮುದಾಯ ಭವನದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಸಭೆಯಲ್ಲಿ ಪ್ರಮುಖವಾಗಿ ಸಂಘದ ಉಪ ವಿಧಿಗಳ ತಿದ್ದುಪಡಿ ಬಗ್ಗೆ ಚರ್ಚೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.