ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಹಾಗೂ ಮಾನವ ಹಕ್ಕುಗಳ ಘಟಕದ ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಕೀಲ ಆರ್.ಕೆ.ನಾಗೇಂದ್ರ ಬಾಬು ಮಾತನಾಡಿದರು. ಬಿ.ಎಂ.ಪ್ರವೀಣ್ ಕುಮಾರ್, ಕುಸುಮಾ ಇತರರು ಇದ್ದರು. 
ಜಿಲ್ಲೆ

ಕುಶಾಲನಗರ ಸರ್ಕಾರಿ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ನಾಗೇಶ ಎಸ್

ಕುಶಾಲನಗರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಹಾಗೂ ಮಾನವ ಹಕ್ಕುಗಳ ಘಟಕದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ಕುಶಾಲನಗರದ ಹಿರಿಯ ವಕೀಲ ಆರ್.ಕೆ.ನಾಗೇಂದ್ರ ಬಾಬು ಮಾತನಾಡಿ, ಮಾನವ ಹಕ್ಕುಗಳು ಬೆಳೆದು ಬಂದ ಹಾದಿ, ಅವುಗಳ ಮಹತ್ವ ಮತ್ತು ಉಲ್ಲಂಘನೆಯ ಪ್ರಕರಣಗಳನ್ನು ಉದಾಹರಣೆ ಸಹಿತವಾಗಿ ವಿದ್ಯಾರ್ಥಿಗಳಿಗೆ ವಿವರಿಸಿದರು. ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ ವಿಧಿಗಳನ್ನು ಉಲ್ಲೇಖಿಸಿ ಅದರ ಮಹತ್ವವನ್ನು ತಿಳಿಸಿದರು. ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕೆ.ಪಿ.ಕುಸುಮಾ, ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಎಂ.ಪ್ರವೀಣ್‌ಕುಮಾರ್, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.