ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಹಾರ್ಡಿಪುರದ ಶ್ರೀಕ್ಷೇತ್ರ ಶ್ರೀಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. 
ಜಿಲ್ಲೆ

ಶ್ರೀಲಕ್ಷ್ಮೀವೆಂಕಟರಮಣಸ್ವಾಮಿಗೆ ವಿಶೇಷ ಪೂಜೆ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ವಿಜಯಪುರ
ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಹಾರ್ಡಿಪುರದ ಶ್ರೀಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಿದರು.
ಮೂರನೇ ಅವಧಿಗೆ ಎನ್‌ಡಿಎ ಸಂಸದೀಯ ನಾಯಕರಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ದೇಶದ ಶಕ್ತಿಯಾಗಿದ್ದಾರೆ. ದೇಶವನ್ನು ಪ್ರಗತಿಯ ಪಥದಲ್ಲಿ ಸಾಧಿಸಲು, ಜನರ ಜೀವನ ಮಟ್ಟ ಸುಧಾರಣೆ, ಬಡವರು, ರೈತರು, ಯುವಕರು ಹಾಗೂ ಮಹಿಳೆಯರ ಸಬಲೀಕರಣಕ್ಕೆ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಬಿಜೆಪಿ ಮುಖಂಡ ನಾಗನಾಯಕನಹಳ್ಳಿ ನಾಗರಾಜುಗೌಡ ಹೇಳಿದರು.
ಮುಖಂಡ ಜಯರಾಮ್ , ಮೋದಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಇದ್ದರು.