ಕೃಷ್ಣರಾಜಸಾಗರದ ಸಮೀಪದ ಚಿಕ್ಕಾಯರಹಳ್ಳಿ ಗ್ರಾಮದಲ್ಲಿ ಯುವಕರು ಓಕಳಿಯಾಡಿದದರು. 
ಜಿಲ್ಲೆ

ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕೆ.ಆರ್.ಸಾಗರ; ಬಸವೇಶ್ವರ ಜಯಂತಿ ಪ್ರಯುಕ್ತ ಸಮೀಪದ ಚಿಕ್ಕಾಯರಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು.

ದೇವಸ್ಥಾನದ ಮುಂಭಾಗದಲ್ಲಿರುವ ಓಕಳಿ ಕುಂಡದಲ್ಲಿ ಬಣ್ಣ ಬಣ್ಣದ ನೀರನ್ನು ತುಂಬಿಸಲಾಗಿತ್ತು. ಮಧ್ಯಾಹ್ನದ ನಂತರ ದೇವರಿಗೆ ಮಹಾಮಂಗಳಾರತಿ ಸಲ್ಲಿಸಿ ಗ್ರಾಮದ ಯುವಕರು ಓಕಳಿಯಾಡಿದರು. ಸಂಜೆ ಬಸವೇಶ್ವರರ ಉತ್ಸವ ಮೂರ್ತಿಯನ್ನು ಮೆರವಣಿಗೆಯನ್ನು ಗ್ರಾಮದ ಎಲ್ಲ ಬೀದಿಗಳಲ್ಲಿಯೂ ಮೆರವಣಿಗೆ ಮಾಡಲಾಯಿತು. ಪ್ರತಿ ಮನೆ ಬಳಿ ಉತ್ಸವ ಮೂರ್ತಿ ಬಂದಾಗ ಹಣ್ಣು-ಕಾಯಿ ನೀಡಿ ಪೂಜೆ ಸಲ್ಲಿಸಿದರು.