ಶೃಂಗೇರಿ: 2015ರಲ್ಲಿ ಶೃಂಗೇರಿ ಪೀಠದ 37ನೇ ಜಗದ್ಗುರುಗಳಾಗಿ ಸನ್ಯಾಸ ಸ್ವೀಕರಿಸಿದ ಪ್ರಯುಕ್ತ ಜಗದ್ಗುರು ಶ್ರೀವಿಧುಶೇಖರಭಾರತೀ ಸ್ವಾಮೀಜಿ ಶೃಂಗೇರಿ ಶ್ರೀಮಠದ ಶಾರದಾಂಬೆ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಶ್ರೀಮಠದ ಆವರಣದಲ್ಲಿರುವ ಶ್ರೀ ಜನಾರ್ಧನ ಸ್ವಾಮಿ, ಶ್ರೀ ಅಂಜನೇಯ, ಶ್ರೀ ಶಂಕರಾಚಾರ್ಯ, ಶ್ರೀ ತೋರಣಗಣಪತಿ, ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ವಿದ್ಯಾಶಂಕರ ದೇವಾಲಯಗಳಿಗೆ ಪೂಜೆ ಸಲ್ಲಿಸಿದರು. ನಂತರ ಈಶ್ವರಗಿರಿಯ ಸ್ತಂಭಗಣಪತಿ, ಭವಾನಿಯಮ್ಮ, ಶ್ರೀ ಮಲಹಾನಿಕರೇಶ್ವರ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.