ಅರಕಲಗೂಡು ಕೋಟೆ ಪ್ರಸನ್ನ ಗಣಪತಿ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿರುವ 52ನೇ ಗಣೇಶೋತ್ಸವ ಪ್ರಯುಕ್ತ ಗುರುವಾರ ಹಾಸನ ಪದವಿ ಪೂರ್ವ ಕಾಲೇಜು ವತಿಯಿಂದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಗಂಗಾಧರ್, ನವೀನ್ ಪಿ. ಉಲಿವಾಲ, ರಮೇಶ್ ವಾಟಾಳ್ ಇತರರಿದ್ದರು. 
ಜಿಲ್ಲೆ

ಗಣೇಶೋತ್ಸವ ಪ್ರಯುಕ್ತ ವಿಶೇಷ ಪೂಜೆ ಪುನಸ್ಕಾರ

ಅರಕಲಗೂಡು: ಪಟ್ಟಣದ ಕೋಟೆ ಪ್ರಸನ್ನ ಗಣಪತಿ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿರುವ 52ನೇ ಗಣೇಶೋತ್ಸವ ಪ್ರಯುಕ್ತ ಗುರುವಾರ ಹಾಸನ ಪದವಿ ಪೂರ್ವ ಕಾಲೇಜು ವತಿಯಿಂದ ವಿಶೇಷ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಲೇಜಿನ ಕಾರ್ಯದರ್ಶಿ ಗಂಗಾಧರ್ ಮಾತನಾಡಿ, ಪ್ರತಿವರ್ಷ ಆಚರಿಸುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವಿಶಿಷ್ಟ ರೀತಿಯಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಸಂಗತಿ ಎಂದರು.
ಕಾಲೇಜು ಪ್ರಾಂಶುಪಾಲ ನವೀನ್ ಪಿ. ಉಲಿವಾಲ, ಸಮಿತಿಯ ಪ್ರವೀಣ್‌ಕುಮಾರ್, ಬಾಲು, ಚಂದ್ರು, ಜಗದೀಶ್, ನವೀನ್, ಮತು, ಪಪಂ ಸದಸ್ಯ ರಮೇಶ್ ವಾಟಾಳ್ ಇತರರಿದ್ದರು. ಮಧ್ಯಾಹ್ನ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.

ಬುಧವಾರ ರಾತ್ರಿ ಕಾಂಗ್ರೆಸ್ ಮುಖಂಡ ಎಚ್.ಪಿ. ಶ್ರೀಧರ್‌ಗೌಡ ಅಭಿಮಾನಿ ಬಳಗದ ವತಿಯಿಂದ ಸಪ್ತಸ್ವರ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಮುಖಂಡ ಎಚ್.ಪಿ.ಶ್ರೀಧರ್‌ಗೌಡ ಅವರನ್ನು ಸಮಿತಿ ವತಿಯಿಂದ ಗೌರವಿಸಲಾಯಿತು.