ಕೊಳ್ಳೇಗಾಲ:ಪಟ್ಟಣದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯದಲ್ಲಿ ಐದನೇ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯ ನೆರವೇರಿತು.
ಕಡೆಯ ಶ್ರಾವಣದಲ್ಲಿಯೇ ಪೌರ್ಣಾಮಿ ಮತ್ತು ಅಮಾವಾಸ್ಯೆ ಇರುವುದು ವಿಶೇಷವಾಗಿದ್ದ, ಶ್ರೀ ಸ್ವಾಮಿಗೆ ಬೆಳಗ್ಗೆ ಪಂಚಾಮೃತ ಅಭಿಷೇಕ, ನೈವೇದ್ಯ ಹಾಗೂ ಮಹಾ ಮಂಗಳಾರತಿ ಸಲ್ಲಿಸಲಾಯಿತು.
ಸಂಜೆ ಲಕ್ಷ್ಮೀ ನಾರಾಯಣ ಸ್ವಾಮಿಯನ್ನು ಹನುಮಂತನ ವಾಹನದಲ್ಲಿ ಪ್ರತಿಷ್ಠಾಪಿಸಿ ಪ್ರಾಕಾರೋತ್ಸವ ನಡೆಸಲಾಯಿತು. ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ಪಟ್ಟಣ ನಿವಾಸಿಗಳು ದೇವಾಲಯದಲ್ಲಿ ನಡೆದ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು ಹೂ, ಹಣ್ಣು, ಕಾಯಿ ಸಮರ್ಪಿಸಿ ಭಕ್ತಿ ಮೆರೆದರು. ದೇವಾಲಯದ ಪೂಜಾ ಕೈಂಕರ್ಯಗಳನ್ನು ಅರ್ಚಕ ಸುದರ್ಶನ್ ಭಟ್ ನೆರವೇರಿಸಿದರು.