ಮಂಗಳೂರು : ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ಸೌಲಭ್ಯಕ್ಕಾಗಿ ಮಂಗಳೂರು ಜಂಕ್ಷನ್-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣಗಳ ಮಧ್ಯೆ ವಿಶೇಷ ರೈಲು ಓಡಾಟ ನಡೆಸಲಿದೆ.
*ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್- ಮಂಗಳೂರು ಜಂಕ್ಷನ್ ಫೆಸ್ಟಿವಲ್ ಸ್ಪೆಷಲ್ ರೈಲು (ನಂ.06037) ನ.2ರಂದು ರಾತ್ರಿ 11.50ಕ್ಕೆ
ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಹೊರಡಲಿದ್ದು, ಮರುದಿನ ಸಾಯಂಕಾಲ 4ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಮಂಗಳೂರು ಜಂಕ್ಷನ್-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಫೆಸ್ಟಿವಲ್ ಸ್ಪೆಷಲ್ ರೈಲು (ನಂ.06038) ನ.3ರಂದು ಸಾಯಂಕಾಲ
6ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 11.10ಕ್ಕೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.
ಈ ರೈಲು 1 ಎಸಿ ತ್ರಿ ಟಯರ್ ಕೋಚ್, 8 ಸ್ಲೀಪರ್ ಕ್ಲಾಸ್ ಕೋಚ್, 10 ಜನರಲ್ ಸೆಕೆಂಡ್ ಕ್ಲಾಸ್ ಕೋಚ್, 2-ಸೆಕೆಂಡ್ ಕ್ಲಾಸ್ ಲಗ್ಗೇಜ್ ಕಂ ಬ್ರೇಕ್ ವ್ಯಾನ್ ಕೋಚ್ ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.