ಜಿಲ್ಲೆ

ಯಶವಂತಪುರ-ವಾಸ್ಕೊ ಮಧ್ಯೆ ವಿಶೇಷ ರೈಲು

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕಾಗಿ ನೈಋತ್ಯ ರೈಲ್ವೆ ವಲಯ ಯಶವಂತಪುರ ಮತ್ತು ವಾಸ್ಕೊ ಮಧ್ಯೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ ನಡೆಸಲಿದೆ.

ಆ. 11ರಂದು ಸಂಜೆ 6.15ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಡುವ ವಿಶೇಷ ರೈಲು, ಮಾರನೇ ದಿನ ಬೆಳಗ್ಗೆ 9.30ಕ್ಕೆ ವಾಸ್ಕೊ ತಲುಪಲಿದೆ. ಮರಳಿ ಆ. 12ರಂದು ಮಧ್ಯಾಹ್ನ 2.30ಕ್ಕೆ ವಾಸ್ಕೊದಿಂದ ಹೊರಡುವ ಈ ರೈಲು, ಮಾರನೇ ದಿನ ಬೆಳಗಿನಜಾವ 4.30ಕ್ಕೆ ಯಶವಂತಪುರ ತಲುಪಲಿದೆ.

ತುಮಕೂರು, ಅರಸಿಕೇರೆ, ಬಿರೂರ, ದಾವಣಗೆರೆ, ಎಸ್​ಎಂಎಂ ಹಾವೇರಿ, ಎಸ್​ಎಸ್​ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಕ್ಯಾಸಲ್​ರಾಕ್, ಕುಲೇಮ್ ಸವೊರ್ಡಮ್ ಮತ್ತು ಮಡಗಾಂವ ನಿಲ್ದಾಣಗಳಲ್ಲಿ ಈ ರೈಲಿಗೆ ನಿಲುಗಡೆ ಸೌಲಭ್ಯ ಒದಗಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯದ ಪ್ರಕಟಣೆ ತಿಳಿಸಿದೆ.