ವಿಜಯವಾಣಿ ಸುದ್ದಿಜಾಲ ಧಾರವಾಡ
ನಾವು ಡೋಪಮೈನ್ ಮತ್ತು ಸಿರೊಟೋನಿನ್ ನಡುವೆ ಸಮತೋಲನ ಹೊಂದಬೇಕು. ಮೆದುಳಿನ ಕಾರ್ಯ ಅರ್ಥ ಮಾಡಿಕೊಳ್ಳುವುದರಿಂದ ಉತ್ತಮ ಜೀವನ ನಡೆಸಲು ಸಹಾಯವಾಗುತ್ತದೆ ಎಂದು ಎಸ್ಡಿಎಂ ವಿಶ್ವ ವಿದ್ಯಾಲಯದ ಕುಲಸಚಿವ ಡಾ. ಚಿದೇಂದ್ರ ಶೆಟ್ಟರ್ ಹೇಳಿದರು.
ನಗರದ ಎಸ್ಡಿಎಂ ವೈದ್ಯಕಿಯ ಮಹಾವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರ ವಿಭಾಗದಿಂದ ಹದಿಹರೆಯದಲ್ಲಿ ಉದ್ಬವಿಸುವ ಪ್ರಶ್ನೆಗಳು ಕುರಿತು ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಗಾರ ಹದಿಹರೆಯದವರ ಕೌಶಲ ಮತ್ತು ಜ್ಞಾನ ಅಭಿವೃದ್ಧಿಗೆ ಸಹಾಯವಾಗಲಿದೆ ಎಂದರು.
ಎಸ್ಡಿಎಂ ವಿಶ್ವ ವಿದ್ಯಾಲಯದ ಹಣಕಾಸು ಸಚಿವ ವಿ.ಜಿ. ಪ್ರಭು, ವೈದ್ಯಕಿಯ ಕಾಲೇಜಿನ ಪ್ರಾಂಶುಪಾಲೆ ಡಾ. ರತ್ನಮಾಲಾ ದೇಸಾಯಿ, ಪ್ರಾಧ್ಯಾಪಕರು, ಇತರರು ಇದ್ದರು.