ಜಿಲ್ಲೆ

ಶ್ರಾವಣ ಮಾಸದ ವಿಶೇಷ ಪೂಜೆ

Davangere - Desk - Ganesh M K

ನ್ಯಾಮತಿ: ಶ್ರಾವಣ ಮಾಸದ ಮೊದಲ ಶನಿವಾರದ ಅಂಗವಾಗಿ ತಾಲೂಕಿನಾದ್ಯಂತ ವಿವಿಧ ದೇವಾಲಯಗಳಲ್ಲಿ ಮುಂಜಾನೆಯಿಂದ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ನಡೆಸಲಾಯಿತು.

ಪಟ್ಟಣದ ಶ್ರೀ ಆಂಜನೇಯ ಸ್ವಾಮಿ ದೇಗುಲದಲ್ಲಿ ಅರ್ಚಕ ಜಯಲಿಂಗಸ್ವಾಮಿ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ದೇವಾಲಯವನ್ನು ವಿವಿಧ ಹೂವುಗಳಿಂದ ಸಿಂಗರಿಸಲಾಗಿತ್ತು. ನಂತರ ಭಕ್ತರಿಗೆ ಪ್ರಸಾದ ನೀಡಲಾಯಿತು.