ಮೈಸೂರು: ನಗರದ ಕಾಳಿದಾಸ ರಸ್ತೆಯ ಶ್ರೀ ಯದುಗಿರಿ ಯತಿರಾಜ ಮಠದ ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜ.6ರಂದು ಸ್ವಾತಿ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 8ಕ್ಕೆ ಸಂಕಲ್ಪ, 9ಕ್ಕೆ ಅಭಿಷೇಕ, 10.30ಕ್ಕೆ ಅಲಂಕಾರ, 11.30ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 12.30ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ (ಧನುರ್ಮಾಸದ ಪ್ರಯುಕ್ತ ಸಂಜೆ ಪ್ರಾಕಾರೋತ್ಸವ ಇರುವುದಿಲ್ಲ) ಎಂದು ದೇವಸ್ಥಾನದ ಪ್ರಧಾನ ವ್ಯವಸ್ಥಾಪಕ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರಳಿ ಅಯ್ಯಂಗಾರ್) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.