ವಿಜಯವಾಣಿ ಸುದ್ದಿಜಾಲ ಧಾರವಾಡ
ವಿಶ್ವ ಪರಿಸರ ದಿನ ನಿಮಿತ್ತ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಹು&ಧಾ ನಾಗರಿಕ ಪರಿಸರ ಸಮಿತಿ, ಶಾಲಾ ಶಿಣ ಇಲಾಖೆ ಹಾಗೂ ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜು ಆಶ್ರಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾಥಿರ್ಗಳಿಗೆ ಜೂ. 1ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಚಿತ್ರಕಲೆ, ಭಾಷಣ ಹಾಗೂ ನಿಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.
ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಶಿಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕಿ ಜಯಶ್ರೀ ಕಾರೇಕರ ಅಧ್ಯತೆ ವಹಿಸುವರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಐ.ಎಚ್. ಜಗದೀಶ, ಪರಿಸರ ಸಮಿತಿ ಅಧ್ಯಕ್ಷ ಶಂಕರ ಕುಂಬಿ ಉಪಸ್ಥಿತರಿರುವರು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಪ ಪರಿಸರ ಅಧಿಕಾರಿ ಸೋಮಶೇಖರ ಹಿರೇಗೌಡರ ತಿಳಿಸಿದ್ದಾರೆ.