ತಾಳಿಕೋಟಿ ಪಟ್ಟಣದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಜಿ.ಪಂ. ಸಿಇಒ ರಿಷಿ ಆನಂದ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಮತ್ತಿತರರಿದ್ದಾರೆ. 
ಜಿಲ್ಲೆ

ಕಾಮಗಾರಿಗೆ ವೇಗ ನೀಡಿ; ಪೂರ್ಣಗೊಳಿಸಿ

ಗಿರೀಶ ಸಗರ

ವಿಜಯಪುರ: ಪ್ರಗತಿಯಲ್ಲಿರುವ ಇಂದಿರಾ ಕ್ಯಾಂಟೀನ್​ ಕಾಮಗಾರಿಗೆ ವೇಗ ನೀಡಿ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ತಾಳಿಕೋಟಿಗೆ ಭೇಟಿ ನೀಡಿದ ಅವರು, ಪಟ್ಟಣದ ಹುಣಸಗಿ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್​ ಕಟ್ಟಡದ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಈ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಕಟ್ಟಡವು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಕ್ಯಾಂಟೀನ್​ ಸುತ್ತ ತಡೆಗೋಡೆ ನಿರ್ಮಿಸಲು ಸ್ಥಳಿಯ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು.

ಹಳೆಯ ಪುರಸಭೆಯ ಆವರಣದಲ್ಲಿನ ಗ್ರಂಥಾಲಯ ಕಟ್ಟಡವನ್ನು ಪರಿಶೀಲನೆ ನಡೆಸಿದ ಅವರು, ಈಗಿರುವ ಗ್ರಂಥಾಲಯದ ಪಕ್ಕದಲ್ಲಿರುವ ಖಾಲಿ ಜಾಗೆಯಲ್ಲಿ ಆಧುನಿಕ ಸೌಲಭ್ಯಯುಳ್ಳ ಅತ್ಯುತ್ತಮ ಸ್ಮಾರ್ಟ್​ ಗ್ರಂಥಾಲಯ ನಿರ್ಮಾಣಕ್ಕಾಗಿ ನೀಲಿ ನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು.

ಜಿಪಂ ಸಿಇಒ ರಿಷಿ ಆನಂದ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಕೌಶಲ್ಯಾಭಿವೃದ್ಧಿಕಾರಿ ಸಿ.ಬಿ. ಕುಂಬಾರ, ತಾಳಿಕೋಟಿ ತಹಸೀಲ್ದಾರ್​ ಪ್ರೇಮಸಿಂಗ್​ ಪವಾರ, ಮುಖ್ಯಾಧಿಕಾರಿ ಮೋಹನ ಜಾಧವ, ಆರೋಗ್ಯ ನಿರೀಕ ಶಿವಾನಂದ ಜುಮನಾಳ ಮತ್ತಿತರರಿದ್ದರು.