ಜಿಲ್ಲೆ

ಸರ್ಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ: ಆಯೋಗ ಭರವಸೆ, ಸಚಿವರು, ಸಿಎಸ್ ಗೆ ಪತ್ರ

ಬಾಬುರಾವ ಯಡ್ರಾಮಿ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಸದಸ್ಯ ಶಶಿಧರ ಕೋಸಂಬೆ ಹೇಳಿಕೆ

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಶಕ್ತಿ ಯೋಜನೆ ಜಾರಿಗೊಂಡ ಬಳಿಕ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಿ ಬರಲು ಸಮಸ್ಯೆಯಾಗುತ್ತಿದ್ದು, ಹೀಗಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗಾಗಿ ಪ್ರತ್ಯೇಕ ಬಸ್ ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸಭೆ ನಡೆಸಿ, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳಿಗೆ ಹೋಗಿ ಬರುವ ಮಕ್ಕಳ ಪ್ರಯಾಣ ಕಷ್ಟವಾದದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ಕುರಿತು ಸಾರಿಗೆ ಮತ್ತು ಶಿಕ್ಷಣ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿ ಜತೆಗೆ ಚರ್ಚಿಸುವೆ. ಅಲ್ಲದೆ ತುರ್ತಾಗಿ ಪತ್ರ ಬರೆಯುವೆ ಎಂದು ಹೇಳಿದರು.
ಸದಸ್ಯ ಶಶಿಧರ ಕೋಸಂಬೆ ಮಾತನಾಡಿ, ಕಲಬುರಗಿಯಲ್ಲಿ ಬಸ್‌ನ ಸಮಸ್ಯೆ ಗಮನಿಸಿದ್ದು, ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸೂಕ್ತ ಬಸ್ ಸೌಕರ್ಯ ಇಲ್ಲಿದಿರುವುದು ಕಂಡುಬAದರೆ, ಆಯೋಗವು ಸ್ವಯಂ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಿದೆ. ಅಲ್ಲದೆ ಹೀಗಾಗದಂತೆ ನೋಡಿಕೊಳ್ಳಲು ಸಂಬAಧಿತ ಇಲಾಖೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದರು.