ಕುಶಾಲನಗರ:
ಪ್ರತಿಯೊಬ್ಬರೂ ಕ್ರೀಡೆ ತುಂಬ ಅಗತ್ಯ. ವಿದ್ಯಾರ್ಥಿಗಳು ಕ್ರೀಡೆಯ ಮಹತ್ವ ಅರಿತುಕೊಳ್ಳಬೇಕು. ಪ್ರತಿನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಬಿಎಸ್‌ಆರ್ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಜಯ್ ಹೇಳಿದರು.
ಪಟ್ಟಣದ ವಿವೇಕಾನಂದ ಪಿ.ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಶುಕ್ರವಾರ ಏರ್ಪಡಿಸಿದ್ದ ಸ್ಪೋರ್ಟ್ಸ್ ಫಿಯೆಸ್ಟಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿನಿತ್ಯ ಕ್ರೀಡೆ ಹಾಗೂ ದೈಹಿಕ ಕಸರತ್ತುಗಳ ಮೂಲಕ ಸದೃಢರಾಗಲು ಸಾಧ್ಯ. ವಿದ್ಯಾರ್ಥಿಗಳು ನಿರಂತರವಾಗಿ ದೈಹಿಕ ಚಟುವಟಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ಆರೋಗ್ಯ ವೃದ್ದಿಸುವುದರೊಂದಿಗೆ ಭವಿಷ್ಯದಲ್ಲೂ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ. ಫಲಿತಾಂಶಕ್ಕಿAತ ಕ್ರೀಡಾ ಸ್ಪೂರ್ತಿಯಿಂದ ಭಾಗಿಯಾಗುವುದು ಮುಖ್ಯವಾಗಿದೆ ಎಂದು ಹೇಳಿದರು.
ವಿವೇಕಾನಂದ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಎನ್.ಎನ್.ಶಂಭುಲಿAಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊರೊನ ಸಂದರ್ಭ ಯಾವುದಕ್ಕೂ ಅಂಜದೆ ಸುಜಯ್ ಅವರು ಸ್ವಯಂಪ್ರೇರಿತರಾಗಿ ಮುಂದೆ ಬಂದು ರೋಗಿಗಳ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದು ಶ್ಲಾಘನೀಯ ವಿಚಾರ. ಹುಟ್ಟಿದ ಊರಿಗೆ ಸೇವೆ ಸಲ್ಲಿಸಬೇಕೆಂಬ ಸದುದ್ದೇಶದಿಂದ ಇಲ್ಲಿಯೇ ನೆಲೆಸಿ ತಮ್ಮ ವೈದ್ಯಕೀಯ ವೃತ್ತಿ ಮುಂದುವರೆಸಿರುವ ಸುಜಯ್ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಕೂಡ ಅಳವಡಿಸಿಕೊಂಡು ಇತರರಿಗೆ ಮಾದರಿಯಾಗುವಂತೆ ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜು ವಿದ್ಯಾರ್ಥಿನಿಯರ ತಂಡದಿAದ ಆಕರ್ಷಕ ಪಿರಮಿಡ್ ಸ್ವಾಗತ ನೃತ್ಯ ಗಮನ ಸೆಳೆಯಿತು. ಈ ಸಂದರ್ಭ ಮಹಾತ್ಮಾಗಾಂಧಿ ಪದವಿ ಕಾಲೇಜಿನ ಪ್ರಾಂಶುಪಾಲೆ ಲಿಖಿತಾ, ಸಂಸ್ಥೆ ಪ್ರಮುಖರಾದ ಮಹೇಶ್, ನಂಜಪ್ಪ ಸೇರಿದಂತೆ ಉಪನ್ಯಾಸಕ ವೃಂದದವರು ಪಾಲ್ಗೊಂಡಿದ್ದರು. ಇದೇ ಸಂದರ್ಭ ಡಾ.ಸುಜಯ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾರ್ಥಿಗಳಿಗೆ ಕ್ರಿಕೆಟ್, ಹಗ್ಗಜಗ್ಗಾಟ, ಹ್ಯಾಂಡ್ ಬಾಲ್, ವಾಲಿಬಾಲ್ ಸೇರಿದಂತೆ ವಿವಿಧ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿತ್ತು.