ಜಿಲ್ಲೆ

ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಅರಕಲಗೂಡು: ತಾಲೂಕಿನ ಸಿದ್ದಾಪುರ ಗೇಟ್ ಮೈದಾನದಲ್ಲಿ ಶನಿವಾರ ಕೊಣನೂರು ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.

ಶಾಸಕ ಎ.ಮಂಜು ಕ್ರೀಡಾಜ್ಯೋತಿ ಬೆಳಗಿಸಿ ಚಾಲನೆ ನೀಡಿ ಮಾತನಾಡಿ, ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿಯಾಗಿದ್ದು ಓದಿನೊಂದಿಗೆ ಒಂದಿಲ್ಲೊಂದು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ ಮಾತನಾಡಿ, ಕ್ರೀಡೆಗಳಲ್ಲಿ ಹಿಂದೆ ಹೆಚ್ಚಿನ ಮಕ್ಕಳು ಭಾಗವಹಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಕ್ರೀಡಾಸಕ್ತಿ ಕ್ಷೀಣಿಸುತ್ತಿರುವುದು ಕಂಡುಬಂದಿದೆ. ಇದಕ್ಕೆ ಮಕ್ಕಳಲ್ಲಿ ಆಸಕ್ತಿ ಕೊರೆತೆ ಇಲ್ಲವೇ ಶಿಕ್ಷಕರ ಪ್ರೇರೇಪಣೆ ಕೊರತೆ ಎನ್ನುವ ಗೊಂದಲವಿದೆ. ಮಕ್ಕಳನ್ನು ಆದಷ್ಟು ಕ್ರೀಡೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಬೇಕಾಗಿದೆ ಎಂದರು.

ದೈಹಿಕ ಶಿಕ್ಷಣ ಪರಿವೀಕ್ಷಕ ನಿಂಗಯ್ಯ, ದೈಹಿಕ ಶಿಕ್ಷಣ ಶಿಕ್ಷಕರಾದ ಸಂಜೀವ್ ಕುಮಾರ್, ನಾಗರಾಜು, ಮುಖಂಡರಾದ ಚೌಡೇಗೌಡ, ಮಂಜೇಗೌಡ ಇತರರಿದ್ದರು.