ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹಿರಿಯರು ಪಾಲ್ಗೊಳ್ಳುವುದರಿಂದ ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲೆಯ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಹಿರಿಯರಿಗೆ ಗೌರವ ನೀಡಿ ಅವರಲ್ಲಿ ಮನೋಲ್ಲಾಸದ ಜತೆಗೆ ಮನರಂಜನೆ ಸಿಕ್ಕಂತಾಗುತ್ತದೆ. ಈ ರೀತಿ ಕ್ರೀಡಾ ಚಟುವಟಿಕೆಗಳಲ್ಲಿ ಹಿರಿಯರು ಪಾಲ್ಗೊಳ್ಳಬೇಕು ಎಂದು ಹೇಳಿದರು.