ಜಿಲ್ಲೆ

ಹಿರಿಯ ನಾಗರಿಕರಿಗಾಗಿ ಸ್ಪರ್ಧೆ

ಡಿ.ವಿ. ಕಮ್ಮಾರ

ಬೆಳಗಾವಿ : ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ನಗರದ ಎಸ್.ಜಿ.ಬಾಳೇಕುಂದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಹಿರಿಯ ನಾಗರಿಕರಿಗಾಗಿ ಕ್ರೀಡಾ ಸ್ಪರ್ಧೆ ಹಾಗೂ ಕಾಲೇಜಿನ ಸಭಾಭವನದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲೆಯ ಹಿರಿಯ ನಾಗರಿಕರ ಸ್ವಯಂ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಈ ಸ್ಪರ್ಧೆಗಳು ಆಯೋಜನೆಗೊಂಡಿದ್ದವು.

ಡಾ.ಅಲ್ಲಮಪ್ರಭು ಮಹಾಸ್ವಾಮೀಜಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಸಂದೀಪ ಪಾಟೀಲ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬೀಲ್ಕರ್, ಹಿರಿಯ ನಾಗರಿಕರ ಸಂಘಗಳ ಪದಾಧಿಕಾರಿಗಳಾದ ವೈ.ಎಂ.ಬೆಂಡಿಗೇರಿ, ಎಸ್.ಬಿ.ಸಿದ್ನಾಳ, ಮಹಾಂತೇಶ ಹಿರೇಮಠ, ವಿರೂಪಾಕ್ಷಿ ಜಿ.ಹಿರೇಮಠ ಇತರರಿದ್ದರು.