ಧಾರವಾಡ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಹಿರಿಯ ನಾಗರಿಕರಿಗೆ ಸೆ. 9ರಂದು ಬೆಳಗ್ಗೆ 10 ಗಂಟೆಯಿಂದ ಮದ್ಯಾಹ್ನ 1.30ರವರೆಗೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿದೆ. ಮದ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಸರ್ಕಾರಿ ನಿವೃತ್ತ ನೌಕರರ ಸಂಘದ ಸಭಾಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಭಾಗವಹಿಸುವವರು ಹಿರಿಯ ನಾಗರಿಕರ ಗುರುತಿನ ಚೀಟಿ ಅಥವಾ ವಯಸ್ಸಿನ ಪ್ರಮಾಣ ಪತ್ರ ತರಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.