ಜಿಲ್ಲೆ

ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಮುಖ್ಯ

ಕುಂದಾಪುರ: ಕ್ರೀಡೆ ವಿದ್ಯಾರ್ಥಿಗಳನ್ನು ದೈಹಿಕ, ವಾನಸಿಕವಾಗಿ ಸದೃಢರನ್ನಾಗಿಸುವಲ್ಲಿ ಅತ್ಯಂತ ಪರಿಣಾಮಕಾರಿ. ಚದುರಂಗದಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ತಾರ್ಕಿಕತೆ, ವಿಚಾರ, ಚಿಂತನೆಗಳಿಗೆ ಪ್ರೇರಣೆ ನೀಡುತ್ತದೆ. ಎಲ್ಲರೊಡನೆ ಬೆರೆತು ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸುವ ಜೀವನ ಪಾಠವನ್ನು ಕಲಿಸುತ್ತದೆ ಎಂದು ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಹೇಳಿದರು.

ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ರಾಮ್‌ಸನ್ ಸರ್ಕಾರಿ ಪ್ರೌಢಶಾಲೆ ಕಂಡ್ಲೂರು ಇವರ ಸಹಯೋಗದೊಂದಿಗೆ ಶನಿವಾರ ನಡೆದ ಕುಂದಾಪುರ ವಲಯ ಮಟ್ಟದ ಚದುರಂಗ ಸ್ಪರ್ಧೆ ಉದ್ಘಾಟನಾ ಸವಾರಂಭದಲ್ಲಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಸಾವ್ರಾಟ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ವಿಜಯಾನಂದ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು.

ಕಾವ್ರಾಡಿ ಗ್ರಾಪಂ ಸದಸ್ಯ ಪ್ರಕಾಶ್ಚಂದ್ರ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ತಾಲೂಕು ಯುವಜನ ಕ್ರೀಡಾ ಅಧಿಕಾರಿ ಕುಸುವಾಕರ ಶೆಟ್ಟಿ, ಉಡುಪಿ ಜಿಲ್ಲಾ ಚದರಂಗ ಸಂ ಅಧ್ಯಕ್ಷ ಉವಾನಾಥ ಕಾಪು, ಕುಂದಾಪುರ ಸರ್ಕಾರಿ ನೌಕರರ ಸಂ ಕಾರ್ಯದರ್ಶಿ ಶೇಖರ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಸದಸ್ಯ ದಿನೇಶ್ ಆಚಾರ್ಯ, ಅಂಪಾರು ವೃತ್ತದ ಶಿಕ್ಷಣ ಸಂಯೋಜಕ ಶಂಕರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಕನ್ಯಾ, ತೀರ್ಪುಗಾರರಾದ ಬಾಬು ಜೆ. ಪೂಜಾರಿ, ಕುಂದಾಪುರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಪಾಲಕರು, ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಭಾರ ಮುಖ್ಯಶಿಕ್ಷಕಿ ರಜನಿ ಹೆಗಡೆ ಸ್ವಾಗತಿಸಿದರು. ಸಹ ಶಿಕ್ಷಕ ಸಂತೋಷ್ ನಿರೂಪಿಸಿ, ವಂದಿಸಿದರು.