filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Auto; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0; 
ಜಿಲ್ಲೆ

ಜೀವನಕ್ಕೆ ಕ್ರೀಡೆ ಆಧಾರ

ಹೊಳೆನರಸೀಪುರ: ಕ್ರೀಡೆ ಜೀವನಕ್ಕೆ ಹಾಗೂ ಜೀವಕ್ಕೆ ಆಧಾರ ಎಂದು ಜಿಲ್ಲಾ ಪದವಿಪೂರ್ವ ಇಲಾಖೆ ಉಪ ನಿರ್ದೇಶಕ ಕೆ.ಪಿ.ಗಂಗಾಧರ್ ಅಭಿಪ್ರಾಯ ಪಟ್ಟಿದ್ದಾರೆ.

ಪಟ್ಟಣದ ಹೇಮಾವತಿ ಕ್ರೀಡಾಂಗಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ದೊಡ್ಡ ಕುಂಚೆವು ನವೋದಯ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಿದ್ದ ಪದವಿಪೂರ್ವ ಕಾಲೇಜುಗಳ ತಾಲೂಕು ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಯುವ ಜನತೆ ಕ್ರೀಡೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಂಡರೆ ಜೀವನಕ್ಕೆ ಆಧಾರವಾಗುವುದರ ಮೂಲಕ ಉದ್ಯೋಗಕ್ಕೆ ದಾರಿಯಾಗುತ್ತದೆ. ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಕ್ರೀಡೆಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಸರ್ಕಾರ ಮೀಸಲಾತಿ ಒದಗಿಸುವ ಮೂಲಕ ಶಿಕ್ಷಣಕ್ಕೆ ಹಾಗೂ ಉದ್ಯೋಗಕ್ಕೆ ಅವಕಾಶ ಕಲ್ಪಿಸುತ್ತದೆ ಎಂದು ಹೇಳಿದರು.

ವಿದ್ಯೆ ಕಲಿಯುವುದರಿಂದ ಜ್ಞಾನ ಸಂಪಾದಿಸಿದರೆ ಕ್ರೀಡೆಯಲ್ಲಿ ತೊಡುವುದರಿಂದ ದೈಹಿಕವಾಗಿ ಆರೋಗ್ಯ ಸಂಪಾದಿಸಬಹುದು. ಇಂದಿನ ಯುವ ಪೀಳಿಗೆ ವಿದ್ಯಾಭ್ಯಾಸದ ಜತೆಯಲ್ಲೇ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಅವಕಾಶಗಳನ್ನು ಪಡೆಯಬಹುದು ಎಂದು ಕಿವಿಮಾತು ಹೇಳಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತೆ ಹೇಳುತ್ತಾ ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರಾಂಶುಪಾಲ ದೇವರಾಜು, ಕುಮಾರಸ್ವಾಮಿ, ನಿವೃತ್ತ ಬಿಸಿಎಂ ಅಧಿಕಾರಿ ಮಂಜೇಗೌಡ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಬಿ.ವೆಂಕಟೇಶ್ ಹಾಗೂ ದೈಹಿಕ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.