ಹುಬ್ಬಳ್ಳಿ: ಇಲ್ಲಿಯ ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್. ಪಾಟೀಲ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಧಾರವಾಡದ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಲಾಗಿತ್ತು.
ಅತಿಥಿಗಳಾಗಿದ್ದ ಶಾಲಾ ಶಿಕ್ಷಣ ಇಲಾಖೆ ಧಾರವಾಡ ಜಿಲ್ಲಾ ಉಪನಿರ್ದೇಶಕ ಸುರೇಶ ಕೆ.ಪಿ. ಅವರು ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಪ್ರಭಾರಿ ಉಪನಿರ್ದೇಶಕರಾದ ಡಾ. ತೇಜಶ್ವಿನಿ ನಾರಾಯಣಕರ, ಧಾರವಾಡ ಜಿಲ್ಲಾ ಕ್ರೀಡಾ ಸಂಯೋಜನಾಧಿಕಾರಿ ಯು.ಎನ್. ಹಜಾರಿ, ಕಾಲೇಜು ಪ್ರಾಚಾರ್ಯ ಎಸ್.ಬಿ. ಸಣಗೌಡರ, ವನಿತಾ ಮಹೇಂದ್ರಕರ, ವಿಜ್ಞಾನ ವಿಭಾಗದ ಸಂಯೋಜಕ ಬಸವರಾಜ ಹಿರೇಮಠ, ಅಣ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.
ಸ್ಥಾನಿಕ ಆಡಳಿತ ಮಂಡಳಿ ಉಪಾಧ್ಯಕ್ಷ ಡಾ. ವಿ.ಕೆ. ರಡ್ಡೇರ ಅಧ್ಯಕ್ಷತೆ ವಹಿಸಿದ್ದರು, ರೂಪಾ ಭಾವಿಕಟ್ಟಿ ಕಾರ್ಯಕ್ರಮ ನಿರೂಪಿಸಿದರು.