ಹೆಬ್ರಿ: ಕ್ರೀಡೆ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕಾರಣವಾಗುವುದರ ಜತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೂ ಸಹಕಾರಿ ಎಂದು ಪ್ರಾಂಶುಪಾಲೆ ಬೇಬಿ ಕೆ.ಶೆಟ್ಟಿ ಹೇಳಿದರು.
ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟ ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲ ಪ್ರೊ.ಸುಧಾಕರ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ಜೂನಿಯರ್ ರಾಷ್ಟ್ರೀಯ ಕಬಡ್ಡಿ ಮತ್ತು ಕುಸ್ತಿ ಕ್ರೀಡಾಪಟು ಸಾಕ್ಷಿ ಶೆಟ್ಟಿ, ಜೂನಿಯರ್ ರಾಷ್ಟ್ರೀಯ ಚೆಸ್ ಕ್ರೀಡಾಪಟು ಪ್ರಣೀತ್ ಜಿ.ಶೆಟ್ಟಿಗಾರ್ ಅವರನ್ನು ಗೌರವಿಸಲಾಯಿತು.
ದೈಹಿಕ ಶಿಕ್ಷಣ ನಿರ್ದೇಶಕ ಕುತುಬುದ್ದೀನ್ ವಾಗಣಗೇರಿ ಪಥ ಸಂಚಲನ ನಿರ್ವಹಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ವಿಶ್ವೇಶ್ವರ ಎನ್.ಗಾಂವ್ಕರ್, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು. ತೀರ್ಪುಗಾರರಾಗಿ ಕಾಲೇಜಿನ ಹಳೇ ವಿದ್ಯಾರ್ಥಿಗಳಾದ ಸುಶಾಂತ್, ಅರ್ಚನಾ ಸಹಕರಿಸಿದರು. ಕ್ರೀಡಾ ಸಂಚಾಲಕ ಡಾ.ಮಂಜುನಾಥ ಆಚಾರಿ ಕಾರ್ಯಕ್ರಮ ನಿರೂಪಿಸಿದರು.