ಯಲಬುರ್ಗಾ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸದೃಢರಾಗಬಹುದು ಎಂದು ತಾಳಕೇರಿ ವಲಯ ಸಂಪನ್ಮೂಲ ವ್ಯಕ್ತಿ ದೊಡ್ಡನಗೌಡ ಪಾಟೀಲ್ ಹೇಳಿದರು.
ಇದನ್ನೂ ಓದಿ:10ಕ್ಕೆ ಗ್ರಾಮೋತ್ಸವ ಕ್ರೀಡಾಕೂಟ
ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಹಿರೇವಂಕಲಕುಂಟಾ ಮತ್ತು ತಾಳಕೇರಿ ವಲಯಮಟ್ಟದ ಪ್ರಾಥಮಿಕ ಶಾಲೆ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು. ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು. ಮಕ್ಕಳು ಸ್ಪರ್ಧೆಯಲ್ಲಿ ಸೋಲು ಗೆಲುವು ಲೆಕ್ಕಿಸದೆ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಿ. ನಿರ್ಣಾಯಕರ ನಿರ್ಧಾರಕ್ಕೆ ಬದ್ಧರಾಗಿ, ಕ್ರೀಡಾಪ್ರೇಮ ಮೆರೆಯಬೇಕು. ಕ್ರೀಡಾಪಟುಗಳು ಸಾಧನೆ ಮೂಲಕ ರಾಜ್ಯಮಟ್ಟದಲ್ಲಿ ಹೆಸರು ಮಾಡಬೇಕು ಎಂದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಲಿಂಗಪ್ಪ ಶ್ಯಾಗೋಟಿ, ದೈಹಿಕ ಪರಿವೀಕ್ಷಕ ವೀರಭದ್ರಪ್ಪ ಅಂಗಡಿ, ದೈಹಿಕ ಶಿಕ್ಷಣ ಶಿಕ್ಷಕ ವಿರೂಪಾಕ್ಷಪ್ಪ ಬನ್ನಿಗೋಳ, ಗ್ರಾಪಂ ಸದಸ್ಯ ಶರಣಪ್ಪ ಹರಿಜನ, ಪಿಡಿಒ ಹನುಮಂತಪ್ಪ ರೇಣಿ, ಎಸ್ಡಿಎಂಸಿ ಅಧ್ಯಕ್ಷ ಯಮನೂರಪ್ಪ ತಳವಾರ್, ನಿವೃತ್ತ ಉಪ ಪ್ರಾಚಾರ್ಯ ಚಂದ್ರಕಾಂತಯ್ಯ ಕಲ್ಯಾಣಮಠ, ಪ್ರಮುಖರಾದ ಬಸವರಾಜ ತಳವಾರ್, ಕನಕರಾಯ ವಾಲ್ಮೀಕಿ, ಬಸಯ್ಯ ಹಿರೇಮಠ, ಶೇಖರಗೌಡ ಪೊಲೀಸ್ ಪಾಟೀಲ್ ಇತರರಿದ್ದರು.