ಕೊಳ್ಳೇಗಾಲ ಪಟ್ಟಣದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಚಾಮರಾಜನಗರ ವಿಶ್ವವಿದ್ಯಾನಿಲಯ 10 ಕಿ.ಮೀ. ಪುರುಷ ಮತ್ತು ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆಗೆ ಚಾಲನೆ ನೀಡಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಎಲ್.ಮೋಸಸ್ ಮಾತನಾಡಿದರು. ಡಾ.ಶಾಂತರಾಜು ಜಯಲಕ್ಷ್ಮಿ, ಡಾ.ಜಯಶಂಕರ್, ಪ್ರೊ.ಸುಂದರಮೂರ್ತಿ, ವೇಣುಗೋಪಾಲ್ ಇತರರು ಇದ್ದಾರೆ. 
ಜಿಲ್ಲೆ

ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ

ವಸಂತಕುಮಾರ್ ಬಿ

ಕೊಳ್ಳೇಗಾಲ: ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದು ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಎಲ್.ಮೋಸಸ್ ಹೇಳಿದರು.

ಪಟ್ಟಣದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಚಾಮರಾಜನಗರ ವಿಶ್ವವಿದ್ಯಾನಿಲಯ 10 ಕಿ.ಮೀ. ಪುರುಷ ಮತ್ತು ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆಗೆ ಚಾಲನೆ ನೀಡಿ ನಂತರ ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡೆಗಳ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕಿದೆ. ಇದ್ದರಿಂದ ದೇಶದ ಕ್ರೀಡಾ ಕ್ಷೇತ್ರ ಅಭಿವೃದ್ಧಿ ಆಗಲಿದೆ. ಹಾಗಾಗಿ ಪಠ್ಯದ ಜತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಆಸಕ್ತಿ ತೊರಬೇಕು. ವಿದ್ಯಾರ್ಥಿಗಳು ಉತ್ತಮ ವಿಚಾರಗಳನ್ನು ಕರಗತ ಮಾಡಿಕೊಂಡಾಗ ಮಾತ್ರ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ವಿದ್ಯಾರ್ಥಿ ದಿಸೆ ವಿಚಾರಗಳ ಕ್ರೋಢಿಕರಣಕ್ಕೆ ಸೂಕ್ತ ಸಮಯವಾಗಿದೆ. ಹಿಂದೆ, ಗ್ರಾಮೀಣ ಪ್ರದೇಶದ ಶಿಕ್ಷಣ ವ್ಯವಸ್ಥೆಗೂ ನಗರ ಪ್ರದೇಶದ ಶಿಕ್ಷಣಕ್ಕೂ ಅಜಗಜಾಂತರ ವ್ಯತ್ಯಾಸಗಳು ಕಂಡು ಬರುತಿತ್ತು. ಆದರೆ ಈಗ ಅಂತರ್ಜಾಲದಿಂದಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಸಾಧ್ಯವಾಗುತ್ತಿದೆ. ಕೇವಲ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಉತ್ತಮ ಭವಿಷ್ಯವಿದೆ ಎಂದು ಉಳಿದವರು ನಿರಾಸೆಪಡಬಾರದು. ಪ್ರತಿಯೊಬ್ಬರು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ವೇದಕೆ ಕಾರ್ಯಕ್ರಮ ನಂತರ ಗುಡ್ಡಗಾಡು ಓಟ, ಚೆಸ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್, ಖೋಖೋ, ಕಬಡ್ಡಿ, ಸೇರಿದಂತೆ ಇತರೆ ಕ್ರೀಡೆಗಳು ನಡೆಯಿತು. ಇದರಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಚಾಮರಾಜನಗರ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಶಾಂತರಾಜು, ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಜಯಲಕ್ಷ್ಮೀ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಜಯಶಂಕರ್, ಪ್ರೊ.ಸುಂದರ ಮೂರ್ತಿ, ವೇಣುಗೋಪಾಲ್ ಮಹದೇವಯ್ಯ, ವಿವಿಧ ಕಾಲೇಜಿನಿಂದ ಆಗಮಿಸಿದ ದೈಹಿಕ ಶಿಕ್ಷಣ ನಿರ್ದೇಶಕರು, ಕ್ರೀಡಾಪಟುಗಳು ವಿದ್ಯಾರ್ಥಿಗಳು ಇದ್ದರು.