ಜಿಲ್ಲೆ

ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ: ರಾಜೇಶ್ವರಿ ಎಸ್.ಕರ್ಕೇರ ಹೇಳಿಕೆ

ಮೂಲ್ಕಿ: ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆ ಬೆಳೆಸುವುದರ ಮುಖೇನ ದೈಹಿಕವಾಗಿ, ಮಾನಸಿಕವಾಗಿ ಸದೃಢರಾದಲ್ಲಿ ಶೈಕ್ಷಣಿಕ ಸಾಧಕರಾಗಲು ಸಾಧ್ಯವಿದೆ ಎಂದು ಹೆಜಮಾಡಿಕೋಡಿ ವಿದ್ಯಾಪ್ರಸಾರ ವಿದ್ಯಾಮಂದಿರ ಪ್ರಾಂಶುಪಾಲೆ ರಾಜೇಶ್ವರಿ ಎಸ್.ಕರ್ಕೇರ ಹೇಳಿದರು.

ಮೂಲ್ಕಿ ಕಿಲ್ಪಾಡಿ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಆಡಳಿತ ಮಂಡಳಿ ಅಧ್ಯಕ್ಷ ಕೆ.ನರಸಿಂಹ ಪೈ, ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ರಾಮದಾಸ್ ಕಾಮತ್ ಶುಭ ಹಾರೈಸಿದರು. ಶಾಲಾ ಪ್ರಾಂಶುಪಾಲೆ ಕಾಮಾಕ್ಷಿ ಆರ್.ನಾಯಕ್ ಸ್ವಾಗತಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪೂಜಾ ವಂದಿಸಿದರು. ಶ್ರೀಲಕ್ಷ್ಮಿ ಕಾಮತ್ ಹಾಗೂ ಅಮಿತಾ ಕೆ. ನಿರೂಪಿಸಿದರು.