ಜಿಲ್ಲೆ

ಕ್ರೀಡಾ ಸಾಧನೆ ತರಲಿದೆ ಉದ್ಯೋಗ ಭಾಗ್ಯ

Davangere - Desk - Mahesh Babu E

ಹೊಳಲ್ಕೆರೆ: ಕ್ರೀಡಾ ಕ್ಷೇತ್ರದಲ್ಲಿನ ಸಾಧನೆ ಆರೋಗ್ಯ, ನೆಮ್ಮದಿ ಜತೆಗೆ ಉದ್ಯೋಗ ಅವಕಾಶ ಹೆಚ್ಚು ಕಲ್ಪಿಸಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಶ್ರೀನಿವಾಸ್ ಹೇಳಿದರು.

ತಾಲೂಕಿನ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಮಗಿರಿ ಹೋಬಳಿ ಮಟ್ಟದ ಕ್ರೀಡಾಕೂಟದ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಮಕ್ಕಳು ಕ್ರೀಡೆಗಳಲ್ಲಿ ಹೆಚ್ಚು ತೊಡಗಿಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡಬೇಕು. ಈ ಕ್ಷೇತ್ರದಲ್ಲಿನ ಸಾಧನೆಯಿಂದ ಉನ್ನತ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಸೌಲಭ್ಯ ದೊರೆಯಲಿದೆ ಎಂದರು.

ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಸರ್ಕಾರಿ ನೌಕರ ಸಂಘದ ತಾಲೂಕಾಧ್ಯಕ್ಷ ಲೋಕೇಶ್ ಮಾತನಾಡಿ, ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಶಾಂತಿ ಮತ್ತು ಸಂಯಮದಿಂದ ವರ್ತಿಸಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕ್ರೀಡಾ ಜ್ಯೋತಿ ಸ್ವೀಕರಿಸಿದ ಬಿಆರ್‌ಸಿ ಸುರೇಂದ್ರನಾಥ್ ಮಾತನಾಡಿ, ಅನಾಥಸೇವಾಶ್ರಮವು ಕ್ರೀಡೆಗೆ ಬೇಕಾದ ಸುಸಜ್ಜಿತ ಮೈದಾನ ಮತ್ತು ವಾತಾರವಣ ಹೊಂದಿದ್ದು, ಕ್ರೀಡೆಗಳಲ್ಲಿ ಭಾಗವಹಿಸುವವರಿಗೆ ಸಾಧನೆ ಮಾಡಲು ಹೆಚ್ಚು ಅವಕಾಶ ಇದೆ ಎಂದರು.

ಅನಾಥಸೇವಾಶ್ರಮದ ವ್ಯವಸ್ಥಾಪಕ ಡಿ.ಕೆ.ಚಂದ್ರಪ್ಪ ಮಾತನಾಡಿ, ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರಿಂದ ನಮ್ಮ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಆಗುತ್ತದೆ ಎಂದು ಹೇಳಿದರು.

ಮುಖ್ಯಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಶಾಂತಣ್ಣ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಮೃತ್ಯುಂಜಯಪ್ಪ, ಟಿಪಿಒ ವಿಜಯಕುಮಾರ್, ಶಿಕ್ಷಣ ಸಂಯೋಜಕ ಮಂಜುನಾಥ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಎಂ.ಆರ್.ೇರ್‌ಅಲಿ, ಪ್ರಾಂಶುಪಾಲರಾದ ಜೆ.ರಘುನಾಥ್, ಜಿ.ಶಿವಕುಮಾರ್, ಜೆ.ಸಿದ್ದಲಿಂಗಮ್ಮ, ಉಪಪ್ರಾಚಾರ್ಯ ಆರ್.ಬಿ.ಹಾರೋಮಠ್, ಶಿಕ್ಷಕ ಜಿ.ಚಂದ್ರಪ್ಪ, ಜಿ.ಟಿ.ಶಂಕರಮೂರ್ತಿ ಇದ್ದರು.