ಜಿಲ್ಲೆ

ಕೂಡಿಗೆ ಕ್ರೀಡಾ ಶಾಲೆಯಲ್ಲಿ ಪೋಷಕರ ಸಭೆ

ಸುನಿಲ್ ಪೊನ್ನೇಟಿ

ಕುಶಾಲನಗರ:

ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕೂಡಿಗೆಯ ಕ್ರೀಡಾ ಪ್ರೌಢಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆ ಶಾಲೆಯ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ ಚಕ್ರವರ್ತಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ಪೋಷಕರು ಶಾಲೆಯಲ್ಲಿ ಕ್ರೀಡೆ ಮತ್ತು ಓದುವಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಲು ಪೋಷಕÀರಾಗಿ ತಮ್ಮ ಕರ್ತವ್ಯ ನಿರ್ವಹಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಸ್ಮಯಿ ಚಕ್ರವರ್ತಿ, 10 ನೇ ತರಗತಿಯ ವಿದ್ಯಾರ್ಥಿಗಳು ಕ್ರೀಡೆಯ ಜತೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಲು ಬೇಕಾಗುವ ಎಲ್ಲಾ ಹೆಚ್ಚಿನ ತರಬೇತಿಯನ್ನು ಶಾಲಾ ಶಿಕ್ಷಕರ ವೃಂದ ನೀಡಲು ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಸಹ ಕ್ರೀಡೆಯ ಜತೆಗೆ ಓದಿನ ಕಡೆಗೆ ಹೆಚ್ಚು ಗಮನ ಹರಿಸಿ, ಪರೀಕ್ಷೆ ಎದುರಿಸಿದಾಗ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಲು ಅನುಕೂಲ. ಮುಂದಿನ ವ್ಯಾಸಂಗಕ್ಕೆ ಮತ್ತು ಉದ್ಯೋಗಕ್ಕೆ ಪೂರಕವಾಗಲಿದೆ ಎನ್ನುವ ಉದ್ದೇಶದಿಂದ ಈ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ತರಗತಿಗಳ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಭಾರ ಮುಖ್ಯೋಪಾಧ್ಯಾಯ ಮುರಳಿ, ಕ್ರೀಡಾ ತರಬೇತಿದಾರರಾದ ಬಿ.ಜಿ ಮಂಜುನಾಥ, ಜಿ.ಸುರೇಶ್, ಎ. ಜಿ. ದಿನಮಣಿ, ವಸತಿ ನಿಲಯ ಮೇಲ್ವಿಚಾರಕಿ ಜಿ.ಎಸ್. ಸವಿತಾ, ಶಿಕ್ಷಕರಾದ ಪ್ರೇಮನಾಥನ್, ರಜಿನಿ, ಪಿ.ಆರ್. ಅಶ್ವಿತ, ಮಧುರ, ಗೀತಾ, ಕಚೇರಿ ನಿರ್ವಾಹಕ ಎಂ.ಎಸ್. ಮೋಹನ್ ಪೋಷಕರು, ವಿದ್ಯಾರ್ಥಿಗಳು ಇದ್ದರು.