SHRINIVASAGATTU 
ಜಿಲ್ಲೆ

ಏ.೦೫ ರಂದು ವಸಂತ ಕಾವ್ಯ ಕವಿಗೋಷ್ಠಿ

ರಾಯಚೂರು ಕರ್ನಾಟಕ ಸಂಘ ಹಾಗೂ ಹೊಸಮನಿ ಪ್ರಕಾಶನ ವತಿಯಿಂದ ನಗರದ ಕರ್ನಾಟಕ ಸಂಘದಲ್ಲಿ ಏ.೦೫ ರಂದು ವಸಂತ ಕಾವ್ಯ ಕವಿಗೋಷ್ಠಿಯನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಸಂಘದ ಕಾರ್ಯದರ್ಶಿ ಶ್ರೀನಿವಾಸ ಗಟ್ಟು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕವಿಗೋಷ್ಠಿಯಲ್ಲಿ ರಾಯಚೂರು ನಗರ ಸೇರಿದಂತೆ ವಿವಿಧ ಭಾಗಗಳಿಂದ ೩೯ಕ್ಕೂ ಹೆಚ್ಚಿನ ಕವಿಗಳು ಭಾಗವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಪ್ರಾಚಾರ್ಯ ವೆಂಕಟರಾವ್ ಕುಲಕರ್ಣಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪತ್ರಕರ್ತ ಅರವಿಂದ ಕುಲಕರ್ಣಿ, ಕವಿ ವೇಣು ಜಾಲಿಬೆಂಚಿ, ಸುರಭಿ ಸಾಂಸ್ಕೃತಿಕ ಬಳಗದ ಕಾರ್ಯದರ್ಶಿ ಜಿ.ಬಸವರಾಜ, ಕನ್ನಡ ಮಿತ್ರಕೂಟ ಅಧ್ಯಕ್ಷ ಅಶೋಕ ಕುಮಾರ ಜೈನ್ ಕಾರ್ಯ ಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ನಿವೃತ್ತ ಪ್ರಾಚಾರ್ಯ ಡಾ.ರಾಜಶ್ರೀ ಕಲ್ಲೂರಕಲ್ ವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೆ.ಶಾಂತಪ್ಪ, ಖಜಾಂಚಿ ಹನುಮಂತಪ್ಪ, ಕಾರ್ಯದರ್ಶಿ ಮುರುಳಿಧರ ಕುಲಕರ್ಣಿ, ಹೊಸಮನಿ ಪ್ರಕಾಶನದ ಅಧ್ಯಕ್ಷ ಬಶೀರ ಅಹ್ಮದ್ ಹೊಸಮನಿ ಇದ್ದರು.