ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ರಾಷ್ಟ್ರೀಯ ಸೇವಾ ಯೋಜನೆ ಬದುಕನ್ನು ಪ್ರಬುದ್ಧವಾಗಿ ರೂಪಿಸುವ ಜತೆಗೆ ರಾಷ್ಟ್ರ ನಿರ್ಮಾಣದಲ್ಲಿ ಬಹು ದೊಡ್ಡ ಕಾಣಿಕೆ ನೀಡುತ್ತಾ ಬಂದಿದೆ. ವಿದ್ಯಾರ್ಥಿ ದೆಸೆಯಲ್ಲಿ ಈ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಬದುಕು ಬೆಳಗಿಸಿಕೊಳ್ಳಬೇಕು ಎಂದು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಹೇಳಿದರು.
ನಾರಾವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಗುರುದೇವ ಪದ ವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ-2025 ಉದ್ಘಾಟಿಸಿ ಮಾತನಾಡಿದರು.
ಪಿಡಬ್ಲ್ಯುಡಿ ಗುತ್ತಿಗೆದಾರರ ತಾಲೂಕು ಸಂಘದ ಅಧ್ಯಕ್ಷ ವಿನಯ್ ಹೆಗ್ಡೆ, ನಡ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಮಾತನಾಡಿದರು. ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಪ್ರಿತಿತ ಧರ್ಮ ವಿಜೇತ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವ ಹಿಂದು ಪರಿಷತ್ ನಾರಾವಿ ಘಟಕ ಅಧ್ಯಕ್ಷ ಮುರಾರಿ ರಾವ್, ನಾರಾವಿ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕಿ ಸುಶೀಲಾ, ನಾರಾವಿ ಜನ ಸೇವಾ ಟ್ರಸ್ಟ್ ಅಧ್ಯಕ್ಷ ಅಭಿಜಿತ್ ಜೈನ್ ಶುಭ ಹಾರೈಸಿದರು.
ನಾರಾವಿ ಗ್ರಾಪಂ ಅಧ್ಯಕ್ಷ ರಾಜವರ್ಮ ಜೈನ್, ಉದ್ಯಮಿ ಪ್ರಕಾಶ್ ಜೈನ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುರೇಶ್ ಪೂಜಾರಿ, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಡಾ.ಸವಿತಾ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ., ಕಾಲೇಜಿನ ಎನ್.ಎಸ್.ಎಸ್. ಘಟಕದ ನಾಯಕ ಮಹಮ್ಮದ್ ಜುನೈದ್, ನಾಯಕಿ ಸಂಧ್ಯಾ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲ ಬಿ.ಎ.ಶಮೀವುಲ್ಲಾ ಪ್ರಸ್ತಾವನೆಗೈದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಗಣೇಶ್ ಬಿ.ಶಿರ್ಲಾಲು ಸ್ವಾಗತಿಸಿದರು. ಸಹ ಕಾರ್ಯಕ್ರಮಾಧಿಕಾರಿ ಚಂದನಾ ಅತಿಥಿಗಳನ್ನು ಪರಿಚಯಿಸಿದರು. ಸುಷ್ಮಾ ವಂದಿಸಿದರು. ಸೌಜನ್ಯ ಹಾಗೂ ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.