ಜಿಲ್ಲೆ

ಮೊಸರು ಕುಡಿಕೆ ಉತ್ಸವ

ಸೌಮ್ಯ ಆರ್

ಬೆಳ್ತಂಗಡಿ: ಶ್ರೀರಾಮ ಸೇವಾ ಸಮಿತಿ, ಮದ್ದಡ್ಕ ವಿಶ್ವ ಹಿಂದು ಪರಿಷತ್ ಬಜರಂಗದಳ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಬೆಳಗ್ಗೆ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಧಾನ ಅರ್ಚಕ ಎಂ.ರುರಾಮ ಭಟ್ ಮಠ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿಕೆ ಅಧ್ಯಕ್ಷತೆ ವಹಿಸಿದ್ದರು. ಅನ್ನದಾನ ಸೇವಾಕರ್ತಕರಾದ ದಾನಿಗಳನ್ನು ಗೌರವಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕ ಸುರೇಶ್ ಪೂಜಾರಿ ಬಟ್ಟೆಮಾರು, ಹರೀಶ್ ಪೂಂಜ, ಶ್ರೀರಾಮ ಸೇವಾ ಸಮಿತಿ ಗೌರವ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರೀತಂ ಆಚಾರ್ಯ, ಕೋಶಾಧಿಕಾರಿ ಪ್ರದೀಪ್ ಕುಮಾರ್ ನೇರಳಕಟ್ಟೆ, ವಿನೋದ್ ಶೆಣೈ ಮದ್ದಡ್ಕ ಉಪಸ್ಥಿತರಿದ್ದರು. ಪ್ರಭಾಕರ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿದರು. ಉಮೇಶ್ ಮದ್ದಡ್ಕ ನಿರೂಪಿಸಿದರು. ಶೈಲೇಶ್ ಭದ್ರಕಜೆ ವಂದಿಸಿದರು.