ಜಿಲ್ಲೆ

ಗೋಕುಲನಗರದಲ್ಲಿ ವಿವಿಧ ಆಟೋಟ ಸ್ಪರ್ಧೆ

ಸೌಮ್ಯ ಆರ್

ಕಡಬ: ಕಡಬ ತಾಲೂಕಿನ ಕೈೊಲ- ರಾಮಕುಂಜ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ಗೋಕುಲನಗರದಲ್ಲಿ ಭಾನುವಾರ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು.

ಅಷ್ಟಮಿ ಕಟ್ಟೆಯಲ್ಲಿ ಆತೂರು ಶ್ರೀ ಸದಾಶಿವ ದೇವಸ್ಥಾನದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ಪೂಜಾ ವಿಧಿವಿಧಾನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.

ಸಮಾರೋಪದಲ್ಲಿ ಕೈೊಲ ಜಾನುವಾರು ಸಂವರ್ಧನ ಮತ್ತು ತರಬೇತಿ ಕೇಂದ್ರದ ಪ್ರಭಾರ ಉಪನಿರ್ದೇಶಕ ಡಾ.ಪ್ರಸನ್ನ ಹೆಬ್ಬಾರ್ ಧಾರ್ಮಿಕ ಭಾಷಣ ಮಾಡಿದರು. ಕೈೊಲ ಗ್ರಾಪಂ ಅಧ್ಯಕ್ಷೆ ಪುಷ್ಪಾ ಎಸ್.ಶೆಟ್ಟಿ, ರಾಮಕುಂಜ ಗ್ರಾಪಂ ಅಧ್ಯಕ್ಷೆ ಬಿ.ಸುಚೇತಾ ಮಾತನಾಡಿದರು. ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಮೋಹನ್‌ದಾಸ್ ಶೆಟ್ಟಿ ಬಡಿಲ ಅಧ್ಯಕ್ಷತೆ ವಹಿಸಿದ್ದರು. ರಾಮಕುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ನಿವೃತ್ತ ಕಾರ್ಯದರ್ಶಿ ಚಿತ್ತರಂಜನ್ ರಾವ್ ಬದೆಂಜ ಅವರನ್ನು ಸನ್ಮಾನಿಸಲಾಯಿತು. ಕೊಲ ಗ್ರಾಪಂ ಸ್ವಚ್ಛತಾ ಸಿಬ್ಬಂದಿ ವಸಂತಿ ಕಲ್ಕಾಡಿ, ಸರೋಜಿನಿ ಏಣಿತ್ತಡ್ಕ, ರಾಮಕುಂಜ ಗ್ರಾಪಂನ ಸುಮತಿ ಕಲ್ಲೇರಿ, ಯಶೋದಾ ಶಾರಾದನಗರ ಅವರನ್ನು ಗೌರವಿಸಲಾಯಿತು.

ಪ್ರಧಾನ ಕಾರ್ಯದರ್ಶಿ ವಿನೋದ್ ಪಲ್ಲಡ್ಕ ವರದಿ ವಾಚಿಸಿದರು. ಕ್ರೀಡಾ ಕಾರ್ಯದರ್ಶಿ ಸುದೀಶ್ ಪಟ್ಟೆ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕ್ರೀಡಾ ಜತೆ ಕಾರ್ಯದರ್ಶಿ ಅಭಿನವ್ ಆನೆಗುಂಡಿ ಸ್ವಾಗತಿಸಿದರು. ಸಮಿತಿ ಸಂಚಾಲಕರಾದ ಪ್ರಕಾಶ್ ಕೆ.ಆರ್. ವಂದಿಸಿದರು. ಗಣೇಶ್ ಕೇದಗೆದಡಿ ನಿರೂಪಿಸಿದರು. ಬಳಿಕ ವಿವಿಧ ಭಜನಾ ತಂಡಗಳಿಂದ ಭಜನೆ ಸೇವೆ ನಡೆಯಿತು. ಉದಯ ಕಶ್ಯಪ್ ಪೂರಿಂಗ ಮತ್ತು ಬಾಬು ಕುಲಾಲ್ ಭಜನೆಗೆ ಚಾಲನೆ ನೀಡಿದರು.