ಜಿಲ್ಲೆ

ಸಂಸ್ಕಾರ ಬಿತ್ತಿದರೆ ಭವಿಷ್ಯತ್ತಿನಲ್ಲಿ ಉತ್ತಮ ಫಲ : ವೇದವ್ಯಾಸ ಶಿಶುಮಂದಿರದಲ್ಲಿ ಶಿವಪ್ರಸಾದ್ ಸುರ್ಯ ಅಭಿಮತ

ಸೌಮ್ಯ ಆರ್

ಬೆಳ್ತಂಗಡಿ: ಮಕ್ಕಳಲ್ಲಿ ಸಂಸ್ಕಾರದ ಬೀಜ ಬಿತ್ತಿದರೆ ಭವಿಷ್ಯತ್ತಿನಲ್ಲಿ ಉತ್ತಮ ಫಲವನ್ನು ನೀಡುತ್ತದೆ ಎಂದು ಬ್ಯಾಂಕ್ ಆಫ್ ಬರೋಡ ನೂಜಿಬಾಳ್ತಿಲ ಶಾಖೆ ಪ್ರಬಂಧಕ ಶಿವಪ್ರಸಾದ್ ಸುರ್ಯ ಹೇಳಿದರು.

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರ ವತಿಯಿಂದ ಹವ್ಯಕ ಭವನದಲ್ಲಿ ನಡೆದ ಶ್ರೀ ಕೃಷ್ಟ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶ್ರೀ ವೇದವ್ಯಾಸ ಶಿಶುಮಂದಿರದ ಅಧ್ಯಕ್ಷೆ ಹಿಂದುಮತಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಲಯನ್ ದೇವದಾಸ್ ಶೆಟ್ಟಿ, ಮಾತೃ ಮಂಡಳಿ ಅಧ್ಯಕ್ಷೆ ಮಮಿತಾ ಸುಧೀರ್ ಉಪಸ್ಥಿತರಿದ್ದರು.

ಶಿಶುಮಂದಿರ ಮಾತಾಜಿಗಳಾದ ಅಶ್ವಿನಿ ಮತ್ತು ರವ್ಯಾ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಆಡಳಿತ ಮಂಡಳಿ ಸದಸ್ಯರಾದ ರಚನಾ ಪಿ. ಸ್ವಾಗತಿಸಿದರು. ಉಪಾಧ್ಯಕ್ಷೆ ಸುಧಾಮಣಿ ನಿರೂಪಿಸಿದರು. ಕೋಶಾಧಿಕಾರಿ ಪ್ರಿಯದರ್ಶಿನಿ ವಂದಿಸಿದರು.