ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಮರ್ಯಾದೆ ಪುರುಷೋತ್ತಮ ಶ್ರೀರಾಮ ದೇಶದಲ್ಲಿ ಇಂದಿಗೂ ಆರಾಧ್ಯ ದೈವ. ಆತನ ಆದರ್ಶ ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ಜೀವನದುದ್ದಕ್ಕೂ ಉತ್ತಮರಾಗಿ ಬದುಕಲು ರಾಮಾಯಣ ದಾರಿದೀಪವಾಗಿದೆ. ಮಹರ್ಷಿ ಎಂಬ ಬಿರುದು ವಾಲ್ಮೀಕಿ ಅವರಿಗೆ ಲಭಿಸಿದ್ದೆ ದೇವಾನುದೇವತೆಗಳಿಂದ. ಹೀಗಾಗಿ ಶ್ರೇಷ್ಠರ ಸಾಲಿನಲ್ಲಿದ್ದಾರೆ ಎಂದು ಬಣ್ಣಿಸಿದರು.
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಗುಡ್ಡದೇಶ್ವರಪ್ಪ ಮಾತನಾಡಿ, ರಾಜನೀತಿ, ಸ್ತ್ರೀಯರ ಸಂರಕ್ಷಣೆ, ಸಮಸಮಾಜ ನಿರ್ಮಾಣ, ವೈಚಾರಿಕಾ ಚಿಂತನೆ, ಶಿಕ್ಷಣದ ಮಹತ್ವ, ಪ್ರಾಣಿ-ಪಕ್ಷಿಗಳ ಸಂಕುಲ ಕುರಿತು ಕಾಳಜಿ, ಅರಣ್ಯ ಸಂಪತ್ತಿನ ರಕ್ಷಣೆ ಬಗ್ಗೆ ಇಡೀ ಜಗತ್ತಿಗೆ ಮಾರ್ಗದರ್ಶನ ನೀಡಿದ ಪ್ರಥಮ ಸಂತ ವಾಲ್ಮೀಕಿ ಎಂದು ಸ್ಮರಿಸಿದರು.
ಇದೇ ವೇಳೆ ಸ್ವಾತಂತ್ರö್ಯ ಹೋರಾಟದಲ್ಲಿ ಭಾಗವಹಿಸಿ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಅವರ ಸ್ಮರಣಾರ್ಥ ಜಿಲ್ಲೆಯಲ್ಲಿ ೨೦೨೧-೨೨ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕಗಳಿಸಿದ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ವಿ.ಆರ್.ಸೃಷ್ಠಿ ಅವರಿಗೆ ೧ ಲಕ್ಷ ರೂ. ನಗದು ಬಹುಮಾನ ನೀಡಿ ಅಭಿನಂದಿಸಲಾಯಿತು. ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಮಾರಿಕಾಂಬ ಸ್ತ್ರೀ ಶಕ್ತಿ ಸ್ವ-ಸಹಾಯ ಮಹಿಳಾ ಸಂಘಕ್ಕೆ ೨.೫ ಲಕ್ಷ ರೂ. ಸಹಾಯಧನದ ಚೆಕ್ ವಿತರಿಸಲಾಯಿತು.
ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ನಂದಿನಿದೇವಿ, ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಂಜುನಾಥ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಟಿ.ಎಚ್.ನಾಗೇಂದ್ರನಾಯ್ಕ್, ತಾಲ್ಲೂಕು ಕಲ್ಯಾಣಾಧಿಕಾರಿ ಎ.ಪರಮೇಶ್ವರಪ್ಪ, ನಿಗಮದ ಜಿಲ್ಲಾ ವ್ಯವಸ್ಥಾಪಕಿ ಟಿ.ಎನ್.ಮಂಜುಳಾ ಇತರರಿದ್ದರು.
ಕೋಟ್ ಕ್ರಿ.ಪೂ. ೯೦೦ರ ಕಾಲಘಟ್ಟದಲ್ಲಿಯೇ ಮಹರ್ಷಿ ವಾಲ್ಮೀಕಿಯು ರಾಮಾಯಣದ ಮೂಲಕ ಜಗತ್ತಿಗೆ ರಾಮ ರಾಜ್ಯ ಹಾಗೂ ಆದರ್ಶ ರಾಜ್ಯದ ಪರಿಕಲ್ಪನೆ ಕಟ್ಟಿಕೊಟ್ಟಿದ್ದಾರೆ. ಉತ್ತಮ ವ್ಯಕ್ತಿತ್ವ ಹೊಂದಲು ಇದು ಸಹಕಾರಿಯಾಗಿದೆ. ಡಾ.ಎಸ್.ಕೆ.ಯೋಗಾನಂದ, ಸಹಾಯಕ ಪ್ರಾಧ್ಯಾಪಕ