ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಶ್ರೇಷ್ಠ ಸೌಹಾರ್ದ ಸಹಕಾರಿ ಪ್ರಶಸ್ತಿ ಪುರಸ್ಕೃತ ಅಶೋಕ್ ಪ್ರಭು ದಂಪತಿಯನ್ನು ಸನ್ಮಾನಿಸಲಾಯಿತು 
ಜಿಲ್ಲೆ

ಸಾಬ್ರಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ

ಕೊಕ್ಕರ್ಣೆ: ಸಾಬ್ರಕಟ್ಟೆ ಶಿರಿಯಾರ ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘ ಹಾಗೂ ಗೌಡ ಸಾರಸ್ವತ ಮಹಿಳಾ ಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ 2024ನೇ ಸಾಲಿನ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ರಾಜ್ಯಮಟ್ಟದ ಶ್ರೇಷ್ಠ ಸೌಹಾರ್ದ ಸಹಕಾರಿ ಪ್ರಶಸ್ತಿ ಪುರಸ್ಕೃತ, ಜೈಗಣೇಶ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಪ್ರಭು ದಂಪತಿಯನ್ನು ಸನ್ಮಾನಿಸಲಾಯಿತು.

ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ದಿನಕರ ಶೆಣೈ, ಶಿರಾಲಿ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಿ.ಗೋಪಿನಾಥ್ ಕಾಮತ್, ಕೆನರಾ ಬ್ಯಾಂಕ್ ನಿವೃತ್ತ ಡಿಜಿಎಂ ಅಶೋಕ್‌ಕುಮಾರ್ ಕಿಣಿ, ಉದ್ಯಮಿ ಕೋಟ ರಾಧಾಕೃಷ್ಣ ನಾಯಕ್, ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್‌ನ ನಿಕಟಪೂರ್ವ ಅಧ್ಯಕ್ಷ ನಾಗೇಶ ನಾಯಕ್, ಜಿಎಸ್‌ಬಿ ಸೇವಾ ಸಂಘದ ಅಧ್ಯಕ್ಷ ನಾರಾಯಣ ಶೆಣೈ, ಮಹಿಳಾ ಸಂಘದ ಅಧ್ಯಕ್ಷೆ ಕಾವ್ಯ ವಿ.ಹೆಗ್ಡೆ, ಸಂಘದ ಕಾರ್ಯದರ್ಶಿ ಮಾಧವ ಹೆಗ್ಡೆ, ಮಧುವನ ಗಣೇಶ್ ನಾಯಕ್, ಶಿವಾನಂದ ಶಾನುಭಾಗ್ ಉಪಸ್ಥಿತರಿದ್ದರು.