ಜಿಲ್ಲೆ

ಕ್ರೀಡಾ ಉತ್ಸಾಹದಿಂದ ಆರೋಗ್ಯ ಲಭ್ಯ

ಎ. ಆರ್. ರಘುರಾಮ

ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಸಲಹೆ

  • ಶ್ರೀರಂಗಪಟ್ಟಣ : ಕ್ರೀಡಾ ಉತ್ಸಾಹದಿಂದ ಆರೋಗ್ಯ ಲಭ್ಯ ಎಂದು ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಸಲಹೆ ನೀಡಿದರು.
    ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಓಂಶ್ರೀ ನಿಕೇತನ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
    ಯುವ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಸದೃಢ ಮೈಕಟ್ಟು ಕಾಯ್ದುಕೊಳ್ಳಲು ವಿವಿಧ ಕ್ರೀಡೆಗಳಲ್ಲಿ ಉತ್ಸುಕತೆಯಿಂದ ಭಾಗಿಯಾಗಬೇಕು. ವಿದ್ಯಾರ್ಥಿ ಜೀವನದಿಂದಲೇ ಉತ್ತಮ ಕ್ರೀಡಾಪಟುವಾದವರಿಗೆ ಮುಂದೆ ನಮ್ಮ ದೇಶವನ್ನು ಪ್ರತಿನಿಧಿಸುವ ಅವಕಾಶ ದೊರಕುವಂತಾಗಲಿ ಎಂದರು.