ಜಿಲ್ಲೆ

ಮಧೂರು ದೇಗುಲಕ್ಕೆ ಶ್ರೀಸುಬ್ರಹ್ಮಣ್ಯ ಮಠಾಧೀಶರ ಭೇಟಿ

ಸೌಮ್ಯ ಆರ್

ಕಾಸರಗೋಡು: ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯಕ್ಕೆ ಬುಧವಾರ ಭೇಟಿ ನೀಡಿ ದೇವಾಲಯದ ಮುಖ್ಯ ಪ್ರತಿಷ್ಠಾಪನೆ ಶ್ರೀ ಮದನಂತೇಶ್ವರ ಮತ್ತು ಶ್ರೀ ಸಿದ್ಧಿವಿನಾಯಕ ದೇವರ ದರ್ಶನ ಪಡೆದರು. ಭರದಿಂದ ಸಾಗುತ್ತಿರುವ ಸಮಗ್ರ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿ ಮಂತ್ರಾಕ್ಷತೆ ನೀಡಿದರು.

ಶ್ರೀ ಕ್ಷೇತ್ರ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕುಳೂರು ಹಾಗೂ ಕಾರ್ಯದರ್ಶಿ ಜಯದೇವ ಖಂಡಿಗೆ ಸುಬ್ರಹ್ಮಣ್ಯ ಮಠಾಧೀಶರನ್ನು ಗೌರವಿಸಿ ಜೀರ್ಣೋದ್ಧಾರ ಕಾಮಗಾರಿ ನಡೆದು ಬಂದ ಹಾದಿ ಬಗ್ಗೆ ಮಾಹಿತಿ ನೀಡಿದರು.

ಶ್ರೀ ಮಧೂರು ಕ್ಷೇತ್ರದಲ್ಲಿ 2025 ಮಾರ್ಚ್ 27ರಿಂದ ಎಪ್ರಿಲ್ 7ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವಾ ಕಾರ್ಯಕ್ರಮ ಸಾಂಗವಾಗಿ ನೆರವೇರಲಿ ಎಂದು ಸ್ವಾಮೀಜಿ ಹರಸಿದರು. ದೇವಾಲಯದ ಪ್ರಧಾನ ಅರ್ಚಕರು, ಸಿಬ್ಬಂದಿ, ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.