ಗಂಗಾವತಿ ತಾಲೂಕಿನ ಬಸಾಪಟ್ಟಣ ವಲಯದ ಆಗೋಲಿ ಕಾರ್ಯಕ್ಷೇತ್ರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷ ರಾಮಣ್ಣ ಮರಿದಿನ್ನಿ ಶುಕ್ರವಾರ ಚಾಲನೆ ನೀಡಿದರು. ಗ್ರಾಪಂ ಪಿಡಿಒ ಕಾಶೀನಾಥ ಮತ್ತು ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಇತರರಿದ್ದರು. 
ಜಿಲ್ಲೆ

ಮಕ್ಕಳು ಆರೋಗ್ಯ, ಶಿಕ್ಷಣದತ್ತ ಗಮನಹರಿಸಲಿ

ಗಂಗಾವತಿ: ತಾಲೂಕಿನ ಬಸಾಪಟ್ಟಣ ವಲಯದ ಆಗೋಲಿ ಕಾರ್ಯಕ್ಷೇತ್ರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಯೋಗದಿಂದ ಮಾನಸಿಕ ಮತ್ತು ದೈಹಿಕ ಸ್ವಾಸ್ಥ್ಯ ಸಾಧ್ಯ

ಗ್ರಾಪಂ ಪಿಡಿಒ ಕಾಶೀನಾಥ ಮತ್ತು ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣದತ್ತ ಮಕ್ಕಳು ಗಮನಹರಿಸಬೇಕಿದ್ದು, ಯೋಗದಿಂದ ಮಾನಸಿಕ ಮತ್ತು ದೈಹಿಕ ಸ್ವಾಸ್ಥೃ ಸಾಧ್ಯ. ಉತ್ತಮ ಹವ್ಯಾಸಗಳತ್ತ ಗಮನ ಕೇಂದ್ರೀಕರಿಸುವಂತೆ ಸಲಹೆ ನೀಡಿದರು.

ಮುಖ್ಯಶಿಕ್ಷಕ ಬಸವರಾಜ ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷ ರಾಮಣ್ಣ ಮರಿದಿನ್ನಿ, ಎಸ್ಡಿಎಂಸಿ ಅಧ್ಯಕ್ಷ ಶಂಕ್ರಪ್ಪ ಬ್ಯಾಗಿ, ವಲಯ ಮೇಲ್ವಿಚಾರಕ ಎಸ್.ಬಿ.ವಿಠ್ಠಲ, ಕೃಷಿ ಮೇಲ್ವಿಚಾರಕ ದಿನೇಶ್, ಸೇವಾ ಪ್ರತಿನಿಧಿಗಳಾದ ರತ್ನಾ, ವಿಜಯಲಕ್ಷ್ಮೀ, ರೇಣುಕಾ, ರವಿ ಇತರರಿದ್ದರು.