ಜಿಲ್ಲೆ

ಕುಸ್ತಿಯಲ್ಲಿ ಶ್ರೀನಿಧಿ ಆಚಾರ್ಯ ತೃತೀಯ

ಇಂದಿರಾ ಎನ್ ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ 2025ರ ಪಂದ್ಯಾಟದಲ್ಲಿ ಕುಂದಾಪುರ ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಶ್ರೀನಿಧಿ ಆಚಾರ್ಯ ತೃತೀಯ ಸ್ಥಾನ ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ -ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.