ಮಂಡ್ಯ: ಶ್ರೀರಂಗಪಟ್ಟಣದ ಪಾರಂಪರಿಕ ದಸರೆಯನ್ನು ಸುತ್ತೂರು ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅಧಿಕೃತ ಮಾಹಿತಿ ನೀಡಿದ್ದಾರೆ. ಜತೆಗೆ ಬೆಂಗಳೂರಿನಲ್ಲಿ ಸ್ವಾಮೀಜಿ ಅವರನ್ನು ಭೇಟಿ ಸನ್ಮಾನಿಸಿ ಅಧಿಕೃತ ಆಹ್ವಾನ ನೀಡಲಾಗಿದೆ.
ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಅವರು ಶ್ರೀಗಳನ್ನು ಭೇಟಿ ಮಾಡಿ ದಸರಾ ಉದ್ಘಾಟನೆಗೆ ಆಹ್ವಾನಿಸಿದರು. ಜತೆಗೆ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2022ರ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಜಿಲ್ಲಾಧಿಕಾರಿ ಎಸ್.ಅಶ್ವಥಿ, ಜಿಪಂ ಸಿಇಒ ಶಾಂತಾ ಎಲ್.ಹುಲ್ಮನಿ, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಇತರರಿದ್ದರು.