ಜಿಲ್ಲೆ

ದಸರಾ ಕಾರ್ಯಕ್ರಮಗಳು ಅರ್ಥಪೂರ್ಣವಾಗಿರಲಿ: ಶಾಸಕ ರಮೇಶ ಬಂಡಿಸಿದ್ದೇಗೌಡ ಸೂಚನೆ

ಮಂಡ್ಯ: ದಸರಾ ಉತ್ಸವದಲ್ಲಿ ನಡೆಯುವ ಕಾರ್ಯಕ್ರಮಗಳು ಅರ್ಥಪೂರ್ಣವಾಗಿರಲಿ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಸರಾ ಮ್ಯಾರಥಾನ್ ಓಟವು ಅ.16ರಂದು ಬೆಳಗ್ಗೆ 7ಗಂಟೆಗೆ ತಾಲೂಕು ಕ್ರೀಡಾಂಗಣದಿಂದ ಕರಿಘಟ್ಟದವರೆಗೆ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಪರ್ಧಾರ್ಥಿಗಳು ಅ.15 ರ ವರೆಗೂ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಇದರಲ್ಲಿ 300 ಸ್ಪರ್ಧಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ.  ಎಂದರು.
ಮಹಿಳಾ ದಸರಾ, ರೈತ ದಸರಾ, ಮಕ್ಕಳ ದಸರಾ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿ. ಅ.17ರ ಮಧ್ಯಾಹ್ನ 2ಗಂಟೆಗೆ ಪಾರಂಪಾರಿಕ ಕುಸ್ತಿ ಪಂದ್ಯಾವಳಿಗಳನ್ನು ಸಂದಿಲ್ ಕೋಟೆಯಲ್ಲಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಿ.18ರಂದು ಮಹಿಳೆಯರಿಗೆ ರಂಗೋಲಿ ಮತ್ತು ಚಮಚದಲ್ಲಿ ನಿಂಬೆಹಣ್ಣು ಇಟ್ಟು ಓಡುವ ಸ್ಫರ್ಧೆ ಆಯೋಜಿಸಿ. ಅಂತೆಯೇ ಅಂದು ಬೆಳಗ್ಗೆ 6 ಹಾಗೂ ಸಂಜೆ 5 ಗಂಟೆಗೆ ಹಾಲು ಕರೆಯುವ ಸ್ಪರ್ಧೆ ನಡೆಯಲಿದೆ. ಪ್ರಮುಖವಾಗಿ ದಸರಾ ಉತ್ಸವಕ್ಕೆ ಭಾಗವಹಿಸುವ ಎಲ್ಲ ಸಾರ್ವಜನಿಕರಿಗೂ ಮಧ್ಯಾಹ್ನದ ಉಪಹಾರವನ್ನು ರಂಗನಾಥ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಕುಡಿಯುವ ನೀರು ಪೂರೈಕೆ ಮಾಡಲು ಅಲ್ಲಿನ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಇತರರಿದ್ದರು.